News Karnataka Kannada
Sunday, April 28 2024
ಕೇರಳ

ವಾಹನದಿಂದ ಪಟಾಕಿಗಳನ್ನು ಇಳಿಸುವಾಗ ಸ್ಫೋಟ: ಓರ್ವ ಸಾವು

ವಾಹನದಿಂದ ಪಟಾಕಿಗಳನ್ನು ಇಳಿಸುವಾಗ ಸಂಭವಿಸಿದ ಸ್ಫೋಟದಲ್ಲಿ  ಓರ್ವ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಕೇರಳದ ಚೂರಕ್ಕಾಡ್​ನಲ್ಲಿರುವ ಮನೆಯೊಂದರ ಬಳಿ ನಡೆದಿದೆ.
Photo Credit : News Kannada

ಕೇರಳ: ವಾಹನದಿಂದ ಪಟಾಕಿಗಳನ್ನು ಇಳಿಸುವಾಗ ಸಂಭವಿಸಿದ ಸ್ಫೋಟದಲ್ಲಿ  ಓರ್ವ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಕೇರಳದ ಚೂರಕ್ಕಾಡ್​ನಲ್ಲಿರುವ ಮನೆಯೊಂದರ ಬಳಿ ನಡೆದಿದೆ.

ಮೃತರನ್ನು ಉಳೂರು ಮೂಲದ ಅಶೋಕನ್ ಅವರ ಪುತ್ರ ವಿಷ್ಣು ಎಂದು ಗುರುತಿಸಲಾಗಿದೆ.

ಕೂಡಲೇ ಅವರನ್ನು ಸಮೀಪದ ತ್ರಿಪುಣಿತುರಾ ತಾಲೂಕು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯಾವುದೇ ಪ್ರಯೋಜನವಾಗಿಲ್ಲ ಆಗಲೇ ಪ್ರಾಣಪಕ್ಷಿ ಹಾರಿಹೋಗಿತ್ತು.

ಮನೆಯೊಂದರಲ್ಲೇ ಕಾರ್ಯನಿರ್ವಹಿಸುತ್ತಿದ್ದ ಪಟಾಕಿ ಸಂಗ್ರಹಗಾರದ ಬಳಿ ಈ ಸ್ಫೋಟ ನಡೆದಿದೆ. ಸುಮಾರು 16 ಮಂದಿ ಗಾಯಗೊಂಡಿದ್ದಾರೆ. ಸ್ಫೋಟದಿಂದ ಸಮೀಪದ ಮನೆಗಳು ಹಾಗೂ ಇತರೆ ಕಟ್ಟಡಗಳಿಗೆ ಹಾನಿಯುಂಟಾಗಿದೆ.

ಸ್ಫೋಟದಲ್ಲಿ ಗಾಯಗೊಂಡ 12 ಮಂದಿ ವೈದ್ಯಕೀಯ ಆರೈಕೆಯಲ್ಲಿದ್ದಾರೆ. ಇವರಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದ ಓರ್ವನನ್ನು ಕೊಚ್ಚಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ನಡುವೆ ಪೊಲೀಸರ ಅನುಮತಿ ಪಡೆಯದೇ ಪಟಾಕಿಗಳನ್ನು ಜನವಸತಿ ಪ್ರದೇಶಕ್ಕೆ ಕೊಂಡೊಯ್ಯಲಾಗಿದೆ ಎಂದು ಹೇಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು