ಕೇರಳ

ಕಾಂಗ್ರೆಸ್ ಹಿರಿಯ ನಾಯಕ, ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ ನಿಧನ

ಬೆಂಗಳೂರು: ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಉಮ್ಮನ್ ಚಾಂಡಿ ವಿಧಿವಶರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಉಮ್ಮನ್ ಚಾಂಡಿ ಅವರು ಫೆಬ್ರುವರಿ 12ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು. ಆದ್ರೆ,  ಚಿಕಿತ್ಸೆ ಫಲಕಾರಿಯಾಗದೇ ಇಂದು(ಜುಲೈ 18) ಕೊನೆಯುಸಿರೆಳೆದಿದ್ದಾರೆ.

ಉಮ್ಮನ ಚಾಂಡಿ ಸಾವನ್ನಪ್ಪಿರುವುದನ್ನು ಕೇರಳ ಕಾಂಗ್ರೆಸ್ ರಾಜ್ಯಾಧ್ಯಕ್ಷ ಕೆ. ನಟರಾಜ್​ನ್ ಟ್ವಿಟ್ಟರ್​ ಮೂಲಕ ಖಚಿತಪಡಿಸಿದ್ದಾರೆ.  ಉಮ್ಮನ್ ಚಾಂಡಿ ನಿಧನಕ್ಕೆ ಕೇರಳ ಹಾಲಿ ಸಿಎಂ ಪಿಣರಾಯಿ ವಿಜಯನ್ ಟ್ವೀಟ್​ ಮೂಲಕ ಸಂತಾಪ ಸೂಚಿಸಿದ್ದಾರೆ.

ಉಮ್ಮನ್ ಚಾಂಡಿ 2004 ರಿಂದ 2006 ಹಾಗೂ 2011 ರಿಂದ 2016ರ ವರೆಗೆ ಕೇರಳದ ಮುಖ್ಯಮಂತ್ರಿಯಾಗಿದ್ದರು. ಒಮನ್ ಚಾಂಡಿ 1970 ರಲ್ಲಿ ಪುತ್ತುಪಲ್ಲಿ ಕ್ಷೇತ್ರದಿಂದ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದರು. ಏಷ್ಯಾ-ಪೆಸಿಫಿಕ್ ಪ್ರದೇಶದಲ್ಲಿ ಸಾರ್ವಜನಿಕ ಸೇವೆಯಲ್ಲಿನ ಭ್ರಷ್ಟಾಚಾರವನ್ನು ತಡೆಗಟ್ಟಲು ಶ್ರಮಿಸಿದ್ದ ಒಮ್ಮನ್ ಚಾಂಡಿಗೆ 2013 ರಲ್ಲಿ ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

Ashitha S

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

7 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

8 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

8 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

9 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

9 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

9 hours ago