News Karnataka Kannada
Monday, April 29 2024
ಕೇರಳ

ಕೊಚ್ಚಿ ವಿಶ್ವವಿದ್ಯಾನಿಲಯದ ವಾರ್ಷಿಕ ಉತ್ಸವದಲ್ಲಿ ಕಾಲ್ತುಳಿತ: ನಾಲ್ವರು ವಿದ್ಯಾರ್ಥಿಗಳು ಸಾವು

Four students killed in stampede at Kochi University's annual festival
Photo Credit : News Kannada

ಕೊಚ್ಚಿ: ಕೊಚ್ಚಿ ವಿಶ್ವವಿದ್ಯಾನಿಲಯದ ವಾರ್ಷಿಕ ಉತ್ಸವದ ವೇಳೆ ಕಾಲ್ತುಳಿತಕ್ಕೆ ಸಿಕ್ಕಿ ನಾಲ್ವರು ವಿದ್ಯಾರ್ಥಿಗಳು ಸಾವಿಗೀಡಾಗಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಕೇರಳ ಸರ್ಕಾರ ಈ ಕುರಿತು ತನಿಖೆಗೆ ಶನಿವಾರ ಆದೇಶಿಸಿದೆ. ಉನ್ನತ ಶಿಕ್ಷಣದ ಪ್ರಧಾನ ಕಾರ್ಯದರ್ಶಿ ಮತ್ತು ಕೊಚ್ಚಿನ್ ವಿಶ್ವವಿದ್ಯಾಲಯದ ಉಪಕುಲಪತಿ ಮತ್ತು ರಿಜಿಸ್ಟ್ರಾರ್ ಅವರನ್ನು ಒಳಗೊಂಡ ಮೂವರು ಸದಸ್ಯರ ತಂಡಕ್ಕೆ ಕಾಲ್ತುಳಿತದ ಘಟನೆಯ ಕುರಿತು ತನಿಖೆ ನಡೆಸಲು ರಾಜ್ಯ ಉನ್ನತ ಶಿಕ್ಷಣ ಸಚಿವ ಆರ್ ಬಿಂಧು ನಿರ್ದೇಶಿಸಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಖ್ಯಾತ ಗಾಯಕಿ ನಿಕಿತಾ ಗಾಂಧಿ ಅವರು ಕೊಚ್ಚಿ ಬಳಿಯ ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ (ಸಿಯುಎಸ್ಎಟಿ) ತೆರೆದ ಸಭಾಂಗಣದಲ್ಲಿ ಸಂಗೀತ ಕಾರ್ಯಕ್ರಮ ನೀಡುವ ಮೊದಲು ಕಾಲ್ತುಳಿತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಗೊಂಡ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಲಮಸ್ಸೇರಿ ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಹತ್ತಿರದ ಇತರ ಕೆಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ನಾಲ್ವರು ವಿದ್ಯಾರ್ಥಿಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು