ಅಪ್ಪಾಚಿಮೇಡು: ಶಬರಿಮಲೆಯ ಅಯ್ಯಪ್ಪ ದೇಗುಲಕ್ಕೆ ಕೈಗೊಂಡಿದ್ದ ಪಾದಯಾತ್ರೆಯಲ್ಲಿ ತಮಿಳುನಾಡಿನ 12 ವರ್ಷದ ಬಾಲಕಿ ಕುಸಿದುಬಿದ್ದು ಸಾವನ್ನಪ್ಪಿದ್ದಾಳೆ. ತಮಿಳುನಾಡು ಮೂಲದ ಪದ್ಮಶ್ರೀ (12) ಶಬರಿಮಲೆ ಬೆಟ್ಟದ ಮೇಲಿನ ದೇಗುಲಕ್ಕೆ ಟ್ರೆಕ್ಕಿಂಗ್ ಮಾಡುತ್ತಿರುವಾಗ ಅಪ್ಪಾಚಿಮೇಡು ಎಂಬಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ಪಾಚಿಮೇಡುವಿನ ಹೃದ್ರೋಗ ಚಿಕಿತ್ಸಾ ಕೇಂದ್ರದಲ್ಲಿ ಸಂಜೆ ಆಕೆ ಪ್ರಾಣ ಕಳೆದುಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತದೇಹವನ್ನು ಪಂಬಾ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಆಕೆಗೆ ಉಸಿರಾಟ ಸಮಸ್ಯೆ ಸೇರಿದಂತೆ ಇತರೆ ಆರೋಗ್ಯ ಸಮಸ್ಯೆಗಳಿತ್ತು ಎಂಬುದು ತಿಳಿದುಬಂದಿದೆ. ಬಾಲಕಿ ಮೂರು ವರ್ಷದಿಂದ ಹೃದ್ರೋಗಕ್ಕೆ ಚಿಕಿತ್ಸೆ ಪಡೆಯುತ್ತಿದ್ದಳು, ಡಯಾಲಿಸಿಸ್ ಮಾಡಿಸಿಕೊಳ್ಳುತ್ತಲೇ ಶಬರಿಮಲೆ ಏರಲು ನಿರ್ಧರಿಸಿದ್ದಳು ಎಂದು ತಿಳಿದು ಬಂದಿದೆ.