Categories: ಕೇರಳ

ಕೇರಳ: ಚಲಿಸುತ್ತಿದ್ದ ಕಾರಿನಲ್ಲಿ 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಕೇರಳ: ಚಲಿಸುತ್ತಿದ್ದ ಕಾರಿನಲ್ಲಿ 19 ವರ್ಷದ ಮಾಡೆಲ್ ಒಬ್ಬಳನ್ನು ಗುರುವಾರ ರಾತ್ರಿ ಸಾಮೂಹಿಕ ಅತ್ಯಾಚಾರ (Gang Rape) ನಡೆಸಿದ ಘಟನೆ ಕೇರಳದಲ್ಲಿ ನಡೆದಿದ್ದು, ಈ ಪ್ರಕರಣದ ಸಂಬಂಧ ಎರ್ನಾಕುಲಂ ಪೊಲೀಸರು ಮೂವರು ಪುರುಷರು ಮತ್ತು ಒಬ್ಬ ಮಹಿಳೆಯನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

ಸಂತ್ರಸ್ತ ಮಾಡೆಲ್, ಕೊಚ್ಚಿನ್ ಶಿಪ್‌ಯಾರ್ಡ್‌ ಹತ್ತಿರದ ಪಬ್‌ಗೆ ಹೋಗಿದ್ದಳು ಮತ್ತು ಪೂರ್ತಿ ಕುಡಿದಿದ್ದಳು. ಯುವತಿಯನ್ನು ಮತ್ತಿನಲ್ಲಿ ಇರುವುದನ್ನು ಗಮನಿಸಿದ ಆರೋಪಿಗಳು, ಆಕೆಯ ಮನೆ ಇರುವ ಕಾಕ್ಕನಾಡುಗೆ ಡ್ರಾಪ್ ನೀಡುವುದಾಗಿ ಕಾರಿನೊಳಗೆ ಹತ್ತಿಸಿಕೊಂಡಿದ್ದಾರೆ.

ಬಳಿಕ ವೇಗವಾಗಿ ಹೋಗುತ್ತಿದ್ದ ಕಾರಿನಲ್ಲಿ ಆರೋಪಿಗಳು ಗ್ಯಾಂಗ್ ರೇಪ್ ಮಾಡಿದ್ದಾರೆ. ನಗರಪೂರ್ತಿ ಕಾರ್ ಓಡಿಸಿದ್ದಾರೆ, ಲೈಂಗಿಕವಾಗಿ ಆಕೆಯ ಮೇಲೆ ಹಲ್ಲೆ ಮಾಡಿದ್ದಾರೆ. ಕೊನೆಗೆ ಆಕೆಯನ್ನು ಅವರ ಮನೆಯ ಹತ್ತಿರ ಎಸೆದು ಹೋಗಿದ್ದಾರೆ.

ಸಾಮೂಹಿಕ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಗೆ ಕಲಮೆಸ್ಸರಿ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಆಕೆಗೆ ಗಾಯಗಳಾಗಿರುವುದು ಗೊತ್ತಾಗಿದೆ. ರೇಪ್ ಮಾಡಿದ ಬಳಿಕ ಆಕೆಯನ್ನು ಅವರ ಮನೆಯ ಹತ್ತಿರ ಎಸೆದು ಹೋಗಿದ್ದಾರೆಂದು ಕೇರಳದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಕರಣ ದಾಖಲಾಗಿದ್ದು, ವಿಚಾರಣೆ ಮುಂದುವರಿದಿದೆ.

Sneha Gowda

Recent Posts

ʻಮೋದಿಗೆ ಯಾರೂ ವೋಟ್ ಹಾಕಬೇಡಿ’ ಎಂದಿದ್ದ ಶಿಕ್ಷಕ ಅರೆಸ್ಟ್‌

ಯಾರು ಮೋದಿಗೆ ವೋಟ್​ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…

5 mins ago

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ : ತೆಲುಗು ನಟಿ, ಮಾಡೆಲ್​ ಸಿಸಿಬಿ ವಶಕ್ಕೆ

ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…

17 mins ago

ಜೂನಿಯರ್ ಎನ್​ಟಿಆರ್ ಜನ್ಮದಿನ : ಸ್ಟಾರ್ ಹೀರೋಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ

ಜೂನಿಯರ್ ಎನ್​ಟಿಆರ್ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ.ಈ ವಿಶೇಷ ದಿನದಂದು ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್…

35 mins ago

ಮಲ್ಲಮ್ಮ ಜಯಂತಿಗೆ ಅಗೌರವ : ರೆಡ್ಡಿ ಸಮಾಜ ಪದಾಧಿಕಾರಿಗಳ ಪ್ರತಿಭಟನೆ

ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…

58 mins ago

ಮಳೆಯಿಂದ​ ಪಂದ್ಯ ರದ್ದು : ರಾಯಲ್ಸ್​ ವಿರುದ್ಧ ರಾಜಸ್ಥಾನ್​ ಕಣಕ್ಕೆ

17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ತಂಡಗಳು ಈ…

1 hour ago

ನಿಮ್ಮ ಡಲ್‌ಸ್ಕಿನ್‌ಗೆ ಇದು ಬೆಸ್ಟ್‌ ಪಾನೀಯ : ಎರಡು ವಾರದಲ್ಲೆ ಉತ್ತಮ ರಿಸಲ್ಟ್‌

ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್‌ಸ್ಕಿನ್‌ ಇರುವವರೂ…

1 hour ago