News Karnataka Kannada
Thursday, May 09 2024
ಕೇರಳ

ರಾಹುಲ್‌ ವಿರುದ್ಧ ಕೇರಳ ಬಿಜೆಪಿ ಮುಖ್ಯಸ್ಥ ಕೆ.ಸುರೇಂದ್ರನ್‌ ಸ್ಪರ್ಧೆ

ಲೋಕಸಭಾ ಚುನಾವಣೆಗೆ ಈಗಾಗಲೇ ದಿನಾಂಕ ನಿಗದಿಯಾಗಿದ್ದು, ಈ ಬಾರಿಯೂ ಕಾಂಗ್ರೆಸ್‌ನ ಹಾಲಿ ಸಂಸದ ರಾಹುಲ್‌ ಗಾಂಧಿ ವಯನಾಡಿನಿಂದಲೇ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ರಾಹುಲ್‌ ಗಾಂಧಿ ಅವರಿಗೆ ಪ್ರತಿಸ್ಪರ್ಧಿಯಾಗಿ ಕೇರಳದ ಬಿಜೆಪಿ ಮುಖ್ಯಸ್ಥ ಕೆ. ಸುರೇಂದ್ರನ್‌ ವಯಾನಾಡು ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.
Photo Credit : NewsKarnataka

ತಿರುನಂತಪುರಂ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನಾಂಕ ನಿಗದಿಯಾಗಿದ್ದು, ಈ ಬಾರಿಯೂ ಕಾಂಗ್ರೆಸ್‌ನ ಹಾಲಿ ಸಂಸದ ರಾಹುಲ್‌ ಗಾಂಧಿ ವಯನಾಡಿನಿಂದಲೇ ಸ್ಪರ್ಧೆ ಮಾಡಲಿದ್ದಾರೆ. ರಾಹುಲ್‌ ಗಾಂಧಿ ಅವರಿಗೆ ಪ್ರತಿಸ್ಪರ್ಧಿಯಾಗಿ ಕೇರಳದ ಬಿಜೆಪಿ ಮುಖ್ಯಸ್ಥ ಕೆ. ಸುರೇಂದ್ರನ್‌ ವಯಾನಾಡು ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ.

ರಾಗಾ ಕೇರಳದ ವಯನಾಡು ಹಾಗೂ ಉತ್ತರ ಪ್ರದೇಶದ ಅಮೇಥಿಯಿಂದ 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಅಮೇಥಿಯಲ್ಲಿ ಸ್ಮೃತಿ ಇರಾನಿ ಅವರ ವಿರುದ್ಧ 55,120 ಮತಗಳ ಅಂತರದಿಂದ ರಾಗಾ ಸೋಲು ಕಂಡರು, ವಯನಾಡಿನಲ್ಲಿ ಜಯ ಸಾಧಿಸಿದ್ದರು. ಇದೇ ಸಮಯಕ್ಕೆ ವಯನಾಡಿನಿಂದ ಸ್ಪರ್ಧಿಸಿದ್ದ ರಾಹುಲ್‌ ಗಾಂಧಿ 10,92,197 ಮತಗಳನ್ನು ಪಡೆದುಕೊಂಡಿದ್ದರು. ಈ ಮೂಲಕ 4,31,770 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕೇರಳದ ಜನತೆ ಮೇಲೆ ವಿಶ್ವಾಸ ಇಟ್ಟಿರುವ ರಾಗಾ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಅಲ್ಲದೇ ಕೇರಳದ ಅಲಪ್ಪುಳ ಕ್ಷೇತ್ರದಿಂದ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ತಿರುವನಂತಪುರಂನಿಂದ ಡಾ.ಶಶಿ ತರೂರ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.

ಬಿಜೆಪಿಯ ನಿಷ್ಠಾವಂತ ಕಾರ್ಯರ್ತರಾಗಿದ್ದ ಕೆ. ಸುರೇಂದ್ರನ್‌ 2020ರಲ್ಲಿ ಕೇರಳ ಬಿಜೆಪಿ ಘಟಕದ ರಾಜ್ಯಾಧ್ಯಕ್ಷರಾದರು. 2019 ರಲ್ಲಿ, ಸುರೇಂದ್ರನ್ ಪತ್ತನಂತಿಟ್ಟದಿಂದ ಚುನಾವಣೆಗೆ ಸ್ಪರ್ಧಿಸಿದ್ದು, ಯಶಸ್ವಿಯಾಗಲಿಲ್ಲ. 2018ರಲ್ಲಿ ಶಬರಿಮಲೆಗೆ ಮಹಿಳೆಯರ ಪ್ರವೇಶ ವಿರುದ್ಧದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸುರೇಂದ್ರನ್ ಒಂದು ತಿಂಗಳ ಕಾಲ ಜೈಲಿನಲ್ಲಿದ್ದರು. ಈ ಬಾರಿ ಕೇರಳದಲ್ಲಿ ಬಿಜೆಪಿ ಗೆಲುವಿಗೆ ಶಕ್ತಿ ಮೀರಿ ಶ್ರಮಿಸುತ್ತಿದ್ದಾರೆ. ಹೀಗಾಗಿ ಬಿಜೆಪಿ ಅವರನ್ನು ರಾಹುಲ್‌ ಗಾಂಧಿ ಅವರ ಪ್ರತಿಸ್ಪರ್ಧಿಯಾಗಿ ಕಣಕ್ಕಿಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು