News Karnataka Kannada
Monday, April 29 2024
ಕೇರಳ

ಕೇರಳ ನಿಫಾ ಮುಕ್ತ: ಎಲ್ಲ ಸೋಂಕಿತರ ಪರೀಕ್ಷೆ ಫಲಿತಾಂಶ ನೆಗೆಟಿವ್

Kerala Nipah free: All covid-19 test results negative
Photo Credit : News Kannada

ಕೋಯಿಕ್ಕೋಡ್: ಕೇರಳದ ಕೋಯಿಕ್ಕೋಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾಲ್ವರು ನಿಫಾ ಸೋಂಕಿತರ ಪರೀಕ್ಷಾ ಫಲಿತಾಂಶ ಶುಕ್ರವಾರ ನೆಗೆಟಿವ್ ಬಂದಿದ್ದು, ಎಲ್ಲರೂ ನಿಫಾ ಸೋಂಕಿನಿಂದ ಮುಕ್ತರಾಗಿದ್ದಾರೆ ಎಂದು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.

ಗಂಭೀರ ಸ್ಥಿತಿಯಲ್ಲಿದ್ದ 9 ವರ್ಷದ ಬಾಲಕ ಸೇರಿದಂತೆ ಎಲ್ಲಾ ರೋಗಿಗಳ ಪರೀಕ್ಷೆಯಲ್ಲಿ ಎರಡು ಬಾರಿ ನೆಗೆಟಿವ್ ಬಂದಿದೆ ಎಂದು ಕೇರಳ ಆರೋಗ್ಯ ಸಚಿವರು ತಿಳಿಸಿದ್ದಾರೆ. ಡಬಲ್ ನೆಗೆಟಿವ್ ಎಂದರೆ ನಿರ್ದಿಷ್ಟ ಸಮಯದ ಮಧ್ಯಂತರದ ನಂತರ ತೆಗೆದುಕೊಂಡ ಪ್ರತಿ ನಿಫಾ ರೋಗಿಯ ಎರಡು ಮಾದರಿಗಳು ಪರೀಕ್ಷೆಗೊಳಪಡಿಸಿದಾಗ ನೆಗೆಟಿವ್ ಆಗಿದೆ ಎಂಬುದನ್ನು ಇದು ಸೂಚಿಸುತ್ತದೆ. ಇದರೊಂದಿಗೆ ರೋಗಿಗಳು ಮಾರಣಾಂತಿಕ ವೈರಸ್‌ನಿಂದ ಸಂಪೂರ್ಣ ಮುಕ್ತರಾಗಿದ್ದಾರೆ.

ಸೆಪ್ಟೆಂಬರ್ 16 ರಿಂದ ಇಲ್ಲಿ ನಿಫಾ ವೈರಸ್‌ನ ಯಾವುದೇ ಹೊಸ ಪ್ರಕರಣಗಳು ವರದಿಯಾಗದ ಕಾರಣ ಕೇರಳ ಸರ್ಕಾರವು ಎಲ್ಲಾ ವಲಯಗಳಲ್ಲಿನ ನಿಯಂತ್ರಣವನ್ನು ಹಿಂಪಡೆದಿದೆ. ಇಲ್ಲಿಯವರೆಗೆ ಒಟ್ಟು ಆರು ಜನರಿಗೆ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಅವರಲ್ಲಿ ಇಬ್ಬರು ಸಾವಿಗೀಡಾಗಿದ್ದರು. ಎರಡು ಸಾವುಗಳಲ್ಲಿ ಆಗಸ್ಟ್ 30 ರಂದು ನಿಧನರಾದ ವ್ಯಕ್ತಿ ಸೋಂಕು ತಗುಲಿದ ಮೊದಲು ವ್ಯಕ್ತಿ ಎಂದು ಕಂಡುಬಂದಿದ್ದು, ಇವರಿಂದ ಇತರರು ಸೋಂಕಿಗೆ ಒಳಗಾಗಿದ್ದಾರೆ.

ಸೆಪ್ಟೆಂಬರ್ 24 ರ ಹೊತ್ತಿಗೆ, ನಿಗಾದಲ್ಲಿರುವ ಜನರ ಸಂಖ್ಯೆ 915, ಆದರೆ ಅವರಲ್ಲಿ ಯಾರೂ ಹೆಚ್ಚಿನ ಅಪಾಯದ ವರ್ಗದಲ್ಲಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿಯವರೆಗೆ ಪರೀಕ್ಷಿಸಲಾದ ಮಾದರಿಗಳ ಸಂಖ್ಯೆ 377 ಮತ್ತು ನಕಾರಾತ್ಮಕ ಫಲಿತಾಂಶಗಳ ಸಂಖ್ಯೆ 363 ಎಂದು ಅವರು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು