Categories: ಕೇರಳ

ತಿರುವನಂತಪುರಂ: ಕೇರಳದಲ್ಲಿ ಅತಿ ಕಡಿಮೆ ಮಳೆ ದಾಖಲು

ತಿರುವನಂತಪುರಂ: ಕಳೆದ 47 ವರ್ಷಗಳಿಗೆ ಹೋಲಿಸಿದಲ್ಲಿ ಕೇರಳದಲ್ಲಿ ಜೂನ್‌ ತಿಂಗಳಲ್ಲಿ ಅತಿ ಕಡಿಮೆ ಮಳೆಯಾಗಿರುವುದು ದಾಖಲಾಗಿದೆ. ಪ್ರತಿ ವರ್ಷ ಕೇರಳದಲ್ಲಿ ಜೂನ್‌ ತಿಂಗಳಲ್ಲಿ ಭಾರಿ ಮಳೆ ಮತ್ತು ಪ್ರವಾಹ ಸ್ಥಿತಿ ಇರುತಿತ್ತು. ಕಳೆದ 47 ವರ್ಷಗಳಲ್ಲಿ ಮೊದಲ ಬಾರಿಗೆ ಕೇರಳ ಮಳೆ ಕೊರತೆ ಅನುಭವಿಸಿದೆ.

ಆದರೆ ಇದೀಗ ಕೇರಳದಲ್ಲಿ ಭಾರಿ ವರ್ಷಧಾರೆಯಾಗುವ ಲಕ್ಷಣಗಳಿದ್ದು, ಮುಂಜಾಗ್ರತಾ ಕ್ರಮವಾಗಿ ರಾಜ್ಯದ ಹಲವು ಶಾಲೆಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ.

ಮುಂದಿನ ಐದು ದಿನಗಳಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಮಂಗಳವಾರ ರಾಜ್ಯದ 14 ಜಿಲ್ಲೆಗಳ ಪೈಕಿ ಹತ್ತು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಇಡುಕ್ಕಿ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಅಲಪ್ಪುಳ, ಎರ್ನಾಕುಲಂ ಮತ್ತು ಪತ್ತನಂತಿಟ್ಟ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಎರ್ನಾಕುಲಂ ಮತ್ತು ಪತ್ತನಂತಿಟ್ಟದಲ್ಲಿ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲಾಗಿದ್ದು, ಕಾಸರಗೋಡಿನಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು ಕಾಲೇಜುಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ. ಮಳೆ ಆಪತ್ತು ನಿರ್ವಹಣೆಗೆ 14 ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದೆ. ಪರಿಹಾರ ಶಿಬಿರಗಳನ್ನು ಸಹ ತೆರೆಯಲು ಸಿದ್ಧತೆ ನಡೆದಿದೆ.

Gayathri SG

Recent Posts

ಇಂದು 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…

13 mins ago

ಇಂದಿನ ರಾಶಿ ಭವಿಷ್ಯ : ಈ ರಾಶಿಯವರಿಗೆ ಹೊಸ ಉದ್ಯೋಗ ಆಫರ್ ಬರಲಿದೆ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…

23 mins ago

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

8 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

8 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

9 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

9 hours ago