ಕೇರಳ: ದೇಶಾದ್ಯಂತ ಕೋವಿಡ್ ರೂಪಾಂತರಿ JN.1 ಭೀತಿ ಆವರಿಸಿರುವಂತೆಯೇ ಇತ್ತ ದೇಶದಲ್ಲಿನ ಕೋವಿಡ್ ಸೋಂಕಿತರ ಸಂಖ್ಯೆ ಕೂಡ ಕ್ರಮೇಣ ಹೆಚ್ಚಾಗ ತೊಡಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 341 ಹೊಸ ಪ್ರಕರಣಗಳು ವರದಿಯಾಗಿದೆ. ಇನ್ನು ಕೇರಳದಲ್ಲಿ 24 ಗಂಟೆಗಳ ಅವಧಿಯಲ್ಲಿ ಕೋವಿಡ್ -19 ಪ್ರಕರಣಗಳಲ್ಲಿ ತೀವ್ರ ಏರಿಕೆ ಕಂಡಿದ್ದು, 300 ಜನರಲ್ಲಿ ಸೋಂಕು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ಕೇರಳದ ಸಕ್ರಿಯ ಪ್ರಕರಣಗಳ ಸಂಖ್ಯೆ 2341 ಕ್ಕೆ ಏರಿದೆ. ಒಂದು ದಿನದ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 358 ಪ್ರಕರಣಗಳು ವರದಿಯಾಗಿದ್ದು, ಮೂವರು ಮೃತಪಟ್ಟಿದ್ದಾರೆ. ದೇಶದಾದ್ಯಂತ ಸಕ್ರಿಯ ಪ್ರಕರಣಗಳ ಸಂಖ್ಯೆ 2669 ಕ್ಕೆ ತಲುಪಿದೆ.
ಕೋವಿಡ್ ಸಾಂಕ್ರಾಮಿಕ ತೀವ್ರಗೊಳ್ಳುತ್ತಿದ್ದಂತೆಯೇ ಕೇಂದ್ರ ಆರೋಗ್ಯ ಸಚಿವಾಲಯ, ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ರಾಜ್ಯಗಳಿಗೂ ಈ ಕುರಿತು ಸೂಚನೆ ನೀಡಲಾಗಿದೆ.