News Karnataka Kannada
Monday, April 29 2024
ಕೇರಳ

ಮಗಳ ಮೇಲೆ ಅತ್ಯಾಚಾರ ಮಾಡಲು ತಾಯಿಯ ಅನುಮತಿ: ಆಕೆಗೆ ಕೋರ್ಟ್‌ ನೀಡಿದ ಶಿಕ್ಷೆ ಏನು?

ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಲು ತನ್ನ ಪ್ರೇಮಿಗೆ ಅವಕಾಶ ಕೊಟ್ಟ ಮಹಿಳೆಗೆ ಕೇರಳ ಕೋರ್ಟ್ 40 ವರ್ಷಮತ್ತು 6 ತಿಂಗಳ ಕಠಿಣ ಜೈಲು ಶಿಕ್ಷೆ ಹಾಗೂ 20,000 ರೂ. ದಂಡ ವಿಧಿಸಿ ಆದೇಶಿಸಿದೆ.
Photo Credit : News Kannada

ಕೇರಳ: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಲು ತನ್ನ ಪ್ರೇಮಿಗೆ ಅವಕಾಶ ಕೊಟ್ಟ ಮಹಿಳೆಗೆ ಕೇರಳ ಕೋರ್ಟ್ 40 ವರ್ಷಮತ್ತು 6 ತಿಂಗಳ ಕಠಿಣ ಜೈಲು ಶಿಕ್ಷೆ ಹಾಗೂ 20,000 ರೂ. ದಂಡ ವಿಧಿಸಿ ಆದೇಶಿಸಿದೆ.

ಈ ಆಘಾತಕಾರಿ ಘಟನೆಗೆ ಸಂಬಂಧಿಸಿದಂತೆ ತಿರುವನಂತಪುರಂನ ವಿಶೇಷ ಫಾಸ್ಟ್ ಟ್ರ‍್ಯಾಕ್ ಕೋರ್ಟ್ ಆರೋಪಿ ಮಹಿಳೆಯನ್ನು ತಾಯ್ತನಕ್ಕೆ ಅವಮಾನ ಎಂದು ಪರಿಗಣಿಸಿದೆ. ಮಾತ್ರವಲ್ಲದೆ ಆಕೆ ಯಾವುದೇ ಕರುಣೆಗೆ ಅರ್ಹಳಲ್ಲ ಎಂದು ಘೋಷಿಸಿದ್ದು, ಗರಿಷ್ಠ ಶಿಕ್ಷೆಯನ್ನು ವಿಧಿಸುವುದಾಗಿ ಹೇಳಿದೆ. ಆಕೆ ದಂಡ ಪಾವತಿಸಲು ವಿಫಲಳಾದಲ್ಲಿ ಹೆಚ್ಚುವರಿ 6 ತಿಂಗಳ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ನ್ಯಾಯಾಲಯ ಅದೇಶಿಸಿದೆ.

ಪೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಪ್ರಕರಣಗಳಲ್ಲಿ ಹೆಚ್ಚಾಗಿ ತಾಯಂದಿರು ಕಾನೂನು ಪರಿಣಾಮಗಳನ್ನು ಎದುರಿಸುವುದು ಬಹಳ ವಿರಳ. ಈ ಘಟನೆ 2018ರ ಮಾರ್ಚ್‌ನಿಂದ 2019ರ ಸೆಪ್ಟೆಂಬರ್ ನಡುವೆ ನಡೆದಿತ್ತು. ಈ ಸಮಯದಲ್ಲಿ ಮಹಿಳೆ ತನ್ನ ಮಾನಸಿಕ ಅಸ್ವಸ್ಥ ಪತಿಯಿಂದ ಬೇರ್ಪಟ್ಟು, ಪ್ರಕರಣದ ಪ್ರಮುಖ ಆರೋಪಿಯಾದ ಶಿಶುಪಾಲನ್ ಜೊತೆ ಲಿವ್‌ಇನ್ ರಿಲೇಶನ್‌ಶಿಪ್‌ನಲ್ಲಿ ಇದ್ದಳು. ಆ ಸಂದರ್ಭ ಮಹಿಳೆಯ 7 ವರ್ಷದ ಕಿರಿಯ ಮಗಳು ಸಹ ಅವರೊಂದಿಗೆ ವಾಸಿಸುತ್ತಿದ್ದಳು ಎನ್ನಲಾಗಿದೆ.

ಶಿಶುಪಾಲನ್ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಹಿನ್ನೆಲೆ ಆಕೆಯ ಖಾಸಗಿ ಭಾಗಗಳಿಗೆ ಗಾಯಗಳಾಗಿತ್ತು. ಇದರಲ್ಲಿ ಆಘಾತಕಾರಿ ವಿಚಾರವೆಂದರೆ 2018 ರಿಂದ 2019ರ ನಡುವೆ ಸಂತ್ರಸ್ತ ಬಾಲಕಿಯ ತಾಯಿಯ ಸಹಕಾರದಲ್ಲಿಯೇ ಶಿಶುಪಾಲನ್ ಹಲವಾರು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ತನಿಖೆಯ ಮೂಲಕ ಬಯಲಾಗಿದೆ. ಇಷ್ಟು ಮಾತ್ರವಲ್ಲದೇ ಆತ ಸಂತ್ರಸ್ತೆಯ 11 ವರ್ಷದ ಮಲಸಹೋದರಿಯ ಮೇಲೂ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಲ್ಲಿಯವರೆಗೂ ಬಾಲಕಿಯರಿಗೆ ತಮ್ಮ ಮೇಲಾದ ಲೈಂಗಿಕ ದೌರ್ಜನ್ಯವನ್ನು ಎಲ್ಲೂ ಹೇಳಿಕೊಳ್ಳದಂತೆ ಬೆದರಿಸಲಾಗಿತ್ತು. ಬಳಿಕ ಬಾಲಕಿಯರು ತಮ್ಮ ಅಜ್ಜಿಮನೆಗೆ ಪರಾರಿಯಾಗಿದ್ದು, ಅಲ್ಲಿ ನಡೆದೆಲ್ಲಾ ವಿಚಾರವನ್ನು ಬಹಿರಂಗಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು