Categories: ಕೇರಳ

ಹಿರಿಯ ಗಾಯಕ, ಸಂಗೀತ ನಿರ್ದೇಶಕ ಕೆ.ಜಿ.ಜಯನ್ ನಿಧನ

ಕೊಚ್ಚಿ: ಕರ್ನಾಟಕ ಶಾಸ್ತ್ರೀಯ ಸಂಗೀತಗಾರ ಹಾಗೂ ಸಂಗೀತ ನಿರ್ದೇಶಕ ಕೆ ಜಿ ಜಯನ್ ಇಂದು ಬೆಳಗ್ಗೆ ಕೇರಳದ ತ್ರಿಪುನಿತುರದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

89 ವರ್ಷವಾಗಿದ್ದ ಜಯನ್ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಶಬರಿಮಲೆ ಅಯ್ಯಪ್ಪನ ಪರಮ ಭಕ್ತರಾಗಿದ್ದ ಜಯನ್ ಅವರು ಅರವತ್ತು ವರ್ಷಗಳ ಹಿಂದೆ ಸಂಗೀತಗಾರರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು, ಅವರ ಸಹೋದರ ವಿಜಯನ್ ಜೊತೆ ಸೇರಿ ಸಂಗೀತ ನಿರ್ದೇಶನ, ಹಾಡುಗಾರಿಕೆ ಮಾಡುತ್ತಿದ್ದರು.

ಮಲಯಾಳಂನಲ್ಲಿ ಜಯ-ವಿಜಯನ್ ಜೋಡಿ ಜನಪ್ರಿಯ. ಇಂದಿಗೂ ಶಬರಿಮಲೆಯಲ್ಲಿ ಮುಂಜಾನೆ ಇವರು ಹಾಡಿದ ಹಾಡುಗಳಿಂದಲೇ ದಿನ ಆರಂಭವಾಗುತ್ತದೆ. ಶಬರಿಮಲೆ ಅಯ್ಯಪ್ಪ ದೇಗುಲವು ಪ್ರತಿದಿನ ಬಾಗಿಲು ತೆರೆದುಕೊಳ್ಳುವುದು ‘ಶ್ರೀಕೋವಿಲ್ ನಾದ ತುರನ್ನು….. ಹಾಡಿನ ಮೂಲಕ. ಇದರ ಗಾಯಕರು ಜಯನ್. ಮಾಲಿವುಡ್‌ನ ಪ್ರಮುಖ ಕಲಾವಿದರಲ್ಲಿ ಒಬ್ಬರಾದ ನಟ ಮನೋಜ್ ಕೆ ಜಯನ್ ಅವರ ಕಿರಿಯ ಮಗ.

ಇನ್ನು ಇಂದು ಅಪರಾಹ್ನ ಕೆ ಜಿ ಜಯನ್ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Ashitha S

Recent Posts

ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಲೋಕಾರ್ಪಣೆ

ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ…

3 mins ago

ʼಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಕರಾಳ ದಿನಗಳನ್ನ ಎದುರಿಸಬೇಕಾಗುತ್ತದೆʼ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಮುಂದಿನ ದಿನಗಳಲ್ಲಿ ದೇಶವು ಕರಾಳ ದಿನಗಳನ್ನು ನೋಡಬೇಕಾಗಬಹುದು ಎಂದು ಶಿವಸೇನಾ…

10 mins ago

ವಕೀಲ ಬಾಬಶೆಟ್ಟಿ ಹತ್ಯೆಗೆ 5 ಲಕ್ಷ ಸುಪಾರಿ: ಪ್ರಮುಖ ಆರೋಪಿ ಬಂಧನ

ಐದು ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು, ವಕೀಲನ ಹತ್ಯೆಗೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಬೀದರ್‌ ಜಿಲ್ಲಾ ಪೊಲೀಸರು…

22 mins ago

ದೇಶಾದ್ಯಂತ 24 ಗಂಟೆ ವಿದ್ಯುತ್‌ ಪೂರೈಕೆ ಸೇರಿ 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

2024ರ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ಹತ್ತು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌…

28 mins ago

ಬೀದರ್‌: ಬಿಸಿ ದೋಸೆಯಂತೆ ಮಾರಾಟವಾಗುತ್ತಿದೆ ಎಸಿ, ಕೂಲರ್‌

ಬಿಸಿಲು ಹಾಗೂ ಅದರ ಝಳದಿಂದ ಜನ ಒಂದೆಡೆ ತೀವ್ರ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದರೆ, ಏರ್‌ ಕಂಡಿಷನರ್‌ (ಎಸಿ), ಏರ್‌ ಕೂಲರ್‌ಗಳ…

42 mins ago

ಪರಿಷತ್ ಚುನಾವಣೆಯಲ್ಲೂ ಜೆಡಿಎಸ್ ಜತೆ ಮೈತ್ರಿ ಮುಂದುವರಿಕೆ: ಬಿ.ಎಸ್.ಯಡಿಯೂರಪ್ಪ

ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿಮೈತ್ರಿ ಮುಂದುವರಿಯಲಿದ್ದು, ಮೈತ್ರಿಗೆ ಯಾವುದೇ ಭಂಗ ಆಗುವುದಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ…

59 mins ago