ಕೊಚ್ಚಿ: 168 ಪ್ರಯಾಣಿಕರಿದ್ದ ಏರ್ ಏಷ್ಯಾ ವಿಮಾನವು ಕೊಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಮರುಕ್ಷಣದಲ್ಲಿ ಹಿಂದಿರುಗಿ ಲ್ಯಾಂಡ್ ಆಗಿದೆ.
ಭಾನುವಾರ ತಡರಾತ್ರಿ ಬೆಂಗಳೂರಿಗೆ ಹೊರಟಿದ್ದ ವಿಮಾನ ರಾತ್ರಿ 11.20ರ ಸುಮಾರಿಗೆ ಟೇಕ್ ಆಫ್ ಆದ ಕೂಡಲೇ ತಾಂತ್ರಿಕ ಸಮಸ್ಯೆ ಎದುರಿಸಿತು. ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಹೈಡ್ರಾಲಿಕ್ ವೈಫಲ್ಯ ಕಂಡುಬಂದ ಬಳಿಕ ವಿಮಾನ ನಿಲ್ದಾಣಕ್ಕೆ ಹಿಂದಿರುಗಿದೆ. ಆದರೆ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಯಾವುದೇ ತೊಂದರೆ ಉಂಟಾದ ಬಗ್ಗೆ ವರದಿಯಾಗಿಲ್ಲ.