Categories: ಕೇರಳ

ಶ್ರೀನಿವಾಸನ್ ಹತ್ಯೆ ಕೇಸ್: 15 ಪಿಎಫ್‌ಐ ಕಾರ್ಯಕರ್ತರಿಗೆ ಮರಣದಂಡನೆ !

ಕೇರಳ:  ಬಿಜೆಪಿ ಮುಖಂಡ ರಂಜಿತ್ ಶ್ರೀನಿವಾಸನ್‌ ಅವರನ್ನು ಹತ್ಯೆಗೈದ ಆರೋಪದ ಮೇಲೆ 15 ಮಂದಿ ಪಿಎಫ್‌ಐ ಸದಸ್ಯರಿಗೆ ಕೇರಳ ನ್ಯಾಯಾಲಯ ಇಂದು(ಜ.30) ಮರಣದಂಡನೆ ಶಿಕ್ಷೆ ವಿಧಿಸಿದೆ.

2021 ರ ಡಿಸೆಂಬರ್‌ನಲ್ಲಿ ಅಲಪ್ಪುಳ ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷದ ಒಬಿಸಿ ವಿಭಾಗದ ನಾಯಕ ರಂಜಿತ್ ಶ್ರೀನಿವಾಸನ್ ಅವರ ಹತ್ಯೆಗೆ ಸಂಬಂಧಿಸಿದಂತೆ ಈಗ ನಿಷೇಧಿತ ಇಸ್ಲಾಂ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ದೊಂದಿಗೆ ಸಂಬಂಧ ಹೊಂದಿರುವ 15 ಮಂದಿಗೆ ಕೇರಳ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಮಾವೇಲಿಕ್ಕರ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ವಿಜಿ ಶ್ರೀದೇವಿ ಅವರು ಈ ಶಿಕ್ಷೆ ವಿಧಿಸಿದ್ದಾರೆ. ಪ್ರಾಸಿಕ್ಯೂಷನ್ ಅಪರಾಧಿಗಳಿಗೆ ಗರಿಷ್ಠ ಶಿಕ್ಷೆ ನೀಡಬೇಕೆಂದು ಕೋರಿತ್ತು. ವ್ಯಕ್ತಿಯನ್ನು ಮಗು, ಹೆಂಡತಿ ಮುಂದೆಯೇ ಹತ್ಯೆಗೈಯಲಾಗಿತ್ತು.

ಕೇರಳದಲ್ಲಿ ಇದೇ ಮೊದಲ ಬಾರಿಗೆ ಒಂದೇ ಪ್ರಕರಣದಲ್ಲಿ ಇಷ್ಟು ಮಂದಿಗೆ ಮರಣದಂಡನೆ ವಿಧಿಸಲಾಗಿದೆ. ಜನವರಿ 20 ರಂದು, ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಈ ಪ್ರಕರಣದಲ್ಲಿ ಪಿಎಫ್‌ಐ-ಎಸ್‌ಡಿಪಿಐಗೆ ನಂಟು ಹೊಂದಿರುವ 15 ಜನರನ್ನು ತಪ್ಪಿತಸ್ಥರೆಂದು ಘೋಷಿಸಿತ್ತು.ನ್ಯಾಯಾಲಯ ಇಂದು ಶಿಕ್ಷೆಯನ್ನು ಪ್ರಕಟಿಸಿದೆ.

2021 ರ ಡಿಸೆಂಬರ್ 19ರಂದು  ಬಿಜೆಪಿಯ ಒಬಿಸಿ ಮೋರ್ಚಾ ಕಾರ್ಯದರ್ಶಿ ರಂಜಿತ್ ಶ್ರೀನಿವಾಸನ್ ಅವರನ್ನು ಭಾನುವಾರ ಬೆಳಿಗ್ಗೆ ಅವರ ಮನೆಯ ಹೊರಗೆ ಕೊಂದು ಹಾಕಲಾಗಿದೆ. ರಂಜಿತ್ ಶ್ರೀನಿವಾಸನ್ ಅವರು ಬೆಳಗಿನ ವಾಯುವಿಹಾರಕ್ಕೆಂದು ಹೊರಗೆ ಬಂದಿದ್ದರು. ಆಗ ಎಂಟು ಜನರಿಂದ ಹಂತಕರ ಗುಂಪು ಅವರ ಮೇಲೆ ಮುಗಿಬಿದ್ದು, ಮಾರಕಾಸ್ತ್ರಗಳಿಂದ ಚುಚ್ಚಿ ಪರಾರಿಯಾಗಿದೆ. ತೀವ್ರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ.

Ashitha S

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

1 hour ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

2 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

2 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

2 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

2 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

3 hours ago