News Karnataka Kannada
Monday, April 29 2024
ಕೇರಳ

ಕೇರಳದ 10 ಜಿಲ್ಲೆಗಳಿಗೆ ಹಳದಿ ಅಲರ್ಟ್‌ ಘೋಷಿಸಿದ ಐಎಂಡಿ

Heavy rains lash several parts of Karnataka, including Bengaluru, for two days
Photo Credit : IANS

ತಿರುವನಂತಪುರಂ: ರಾಷ್ಟ್ರದ ಹಲವು ಪ್ರದೇಶಗಳಲ್ಲಿ ಬರಗಾಲದ ಛಾಯೆಯಿದೆ. ಮುಂಗಾರು ಮಳೆ ತೀವ್ರ ಕೊರತೆಯಾಗಿದ್ದು ಕುಡಿಯುವ ನೀರಿಗೆ ಹಾಹಾಕಾರ ಎದ್ದಿದೆ. ಆದರೆ ಇದೀಗ ನೆರೆಯ ಕೇರಳದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇಂದು (ಶನಿವಾರ) ಕೂಡ ಬಿರುಗಾಳಿ ಬೀಸಲಿದೆ.

ಭಾರೀ ಮಳೆಯ ಹಿನ್ನೆಲೆಯಲ್ಲಿ ಕೇರಳದ ಅಲಪ್ಪುಳ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಸೇರಿದಂತೆ 10 ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹಳದಿ ಅಲರ್ಟ್ ಘೋಷಿಸಿದೆ.

ಅರೇಬಿಯನ್ ಸಮುದ್ರದ ಕೊಂಕಣ-ಗೋವಾ ಕರಾವಳಿ ಮತ್ತು ಈಶಾನ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕೇರಳದ ಕರಾವಳಿಯಲ್ಲಿ ಪಶ್ಚಿಮ ಮಾರುತಗಳು ಪ್ರಬಲಗೊಂಡಿವೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಗುಡ್ಡಗಾಡು ಪ್ರದೇಶಗಳಲ್ಲಿ ಜನರಿಗೆ ಎಚ್ಚರಿಕೆಯಿಂದ ಇರಲು ಹವಾಮಾನ ಇಲಾಖೆ ಸೂಚಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು