News Karnataka Kannada
Friday, May 17 2024
ದೇಶ

ರಾಷ್ಟ್ರೀಯ ಹೆದ್ದಾರಿಯ ಅಪಘಾತ ಸ್ಪಾಟ್‌ಗಳಲ್ಲಿ ಕರ್ನಾಟಕಕ್ಕೆ ಎಷ್ಟನೇ ಸ್ಥಾನ ?

Photo Credit : News Kannada

ದೆಹಲಿ: ಭಾರತದಾದ್ಯಂತ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ಸಂಭವಿಸಬಹುದಾದ 5,803 ಸ್ಥಳಗಳನ್ನು ಗುರುತಿಸಲಾಗಿದೆ. ಅವುಗಳನ್ನು ಬ್ಲ್ಯಾಕ್‌ ಸ್ಪಾಟ್‌ ಎಂದು ಕರೆಯಲಾಗುತ್ತದೆ. ಈ ಬ್ಲ್ಯಾಕ್‌ ಸ್ಪಾಟ್‌ಗಳಲ್ಲಿ ಅತಿ ಹೆಚ್ಚು ತಮಿಳುನಾಡಿನಲ್ಲಿ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಲೋಕಸಭೆಯಲ್ಲಿ ಇತ್ತೀಚೆಗೆ ನಡೆದ ಚರ್ಚೆಯಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ. 2018ರಿಂದ 2020 ರವೆಗೆ ಸಂಗ್ರಹಿಸಲಾದ ಮಾಹಿತಿ ಪ್ರಕಾರ ಅವರು ಅಂಕಿ-ಅಂಶಗಳನ್ನು ನೀಡಿದ್ದಾರೆ. ಆದರೆ, 2020ರ ನಂತರದಲ್ಲಿ ಗುರುತಿಸಲಾಗಿರುವ ಬ್ಲ್ಯಾಕ್‌ಸ್ಪಾಟ್‌ಗಳ ಬಗ್ಗೆ ಗಡ್ಕರಿ ಅವರು ಮಾಹಿತಿ ನೀಡಿಲ್ಲವಾಗಿದೆ. ಗಡ್ಕರಿ ಅವರು ನೀಡಿರುವ ಮಾಹಿತಿಯಂತೆ, ತಮಿಳುನಾಡಿನ ರಾಷ್ಟ್ರೀಯ ಹೆದ್ದಾರಿಗಳಲ್ಲಿ 748 ಬ್ಲ್ಯಾಕ್‌ಸ್ಪಾಟ್‌ಗಳಿವೆ. ಪಶ್ಚಿಮ ಬಂಗಾಳದಲ್ಲಿ 701, ಕರ್ನಾಟಕದಲ್ಲಿ 551 ಹಾಗೂ ತೆಲಂಗಾಣದಲ್ಲಿ 485 ಬ್ಲ್ಯಾಕ್‌ಸ್ಪಾಟ್‌ಗಳಿವೆ.

2020ರ ಹಿಂದಿನ ಅಂಕಿಅಂಶಗಳನ್ನು ಒದಗಿಸಿರುವ ಸಚಿವರು, “ದೇಶದ ರಾಷ್ಟ್ರೀಯ ಹೆದ್ದಾರಿಗಳಲ್ಲಿ 5,803 ಬ್ಲ್ಯಾಕ್‌ಸ್ಪಾಟ್‌ಗಳಿವೆ. ಅತಿ ಹೆಚ್ಚು ಬ್ಲ್ಯಾಕ್‌ಸ್ಪಾಟ್‌ಗಳನ್ನು ತಮಿಳುನಾಡು ಹೊಂದಿದೆ.

ಎರಡನೇ ಸ್ಥಾನದಲ್ಲಿ ಪಶ್ಚಿಮ ಬಂಗಾಳ, ಮೂರನೇ ಸ್ಥಾನದಲ್ಲಿ ಕರ್ನಾಟಕ ಹಾಗೂ ನಾಲ್ಕನೇ ಸ್ಥಾನದಲ್ಲಿ ತೆಲಂಗಾಣ ಇದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮಾವಳಿಗಳಂತೆ ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನಿರ್ದಿಷ್ಟ 500 ಮೀ. ಉದ್ದದ ರಸ್ತೆಯಲ್ಲಿ ಮೂರು ವರ್ಷಗಳಲ್ಲಿ ಕನಿಷ್ಟ 5 ರಸ್ತೆ ಅಪಘಾತಗಳು ಸಂಭವಿಸಿದ್ದರೆ ಹಾಗೂ 10 ಮಂದಿ ಗಾಯಗೊಂಡಿದ್ದರೆ ಅಥವಾ ಸಾವನ್ನಪ್ಪಿದ್ದರೆ, ಆ ಸ್ಥಳವನ್ನು ಬ್ಲ್ಯಾಕ್‌ಸ್ಪಾಟ್‌ ಎಂದು ಗುರುತಿಸಲಾಗುತ್ತದೆ” ಎಂದು ಅವರು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು