ದೆಹಲಿ: ದೆಹಲಿಯಲ್ಲಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆಯಾಗಿದೆ. ತೈಲ ಕಂಪನಿಗಳು ಸಿಲಿಂಡರ್ ಬೆಲೆಯನ್ನು 7 ರೂ. ಹೆಚ್ಚಿಸಿವೆ. ಆದರೆ, ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇದರ ಬೆಲೆ ದೀರ್ಘಕಾಲ ಸ್ಥಿರವಾಗಿದೆ. ಈಗ ದೆಹಲಿಯಲ್ಲಿ ವಾಣಿಜ್ಯ ಅನಿಲ ಸಿಲಿಂಡರ್ನ ಚಿಲ್ಲರೆ ಬೆಲೆ ಅಂದರೆ 19 ಕೆಜಿ ಎಲ್ಪಿಜಿ ಸಿಲಿಂಡರ್ ಪ್ರತಿ ಸಿಲಿಂಡರ್ಗೆ 1,773 ರೂ.ನಿಂದ 1,780 ರೂ.ಗೆ ಏರಿಕೆಯಾಗಿದೆ.
ವಾಣಿಜ್ಯ ಸಿಲಿಂಡರ್ ಗಳ ಏರಿಕೆ ಜುಲೈ 1 ರಿಂದ ಜಾರಿಗೆ ಬರಲಿದೆ. ಈ ಹಿಂದೆ, ಜೂನ್ನಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಲಾಗಿತ್ತು, ಆದರೆ 14.2 ಕೆಜಿ ಎಲ್ಪಿಜಿ ಸಿಲಿಂಡರ್ನ ಬೆಲೆಯಲ್ಲಿ ಯಾವುದೇ ಬದಲಾವಣೆ ಇರಲಿಲ್ಲ. ಪ್ರಸ್ತುತ, ಮುಂಬೈನಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1733.50 ರೂ.ಗಳಾಗಿದ್ದು, ಜೂನ್ನಲ್ಲಿ ಕೆಜಿಗೆ 1725 ರೂ. ಇತ್ತು. ಬೆಂಗಳೂರಿನಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ನ ಬೆಲೆ 2190.5 ರೂ ಇದೆ.
ವಾಣಿಜ್ಯ ಸಿಲಿಂಡರ್ಗಳ ಬೆಲೆಯನ್ನು ಸರ್ಕಾರ ಹಲವಾರು ಬಾರಿ ಹೆಚ್ಚಿಸಿದೆ. ಕಳೆದ ತಿಂಗಳು ಜೂನ್ನಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 83 ರೂಪಾಯಿ ಇಳಿಕೆಯಾಗಿತ್ತು. ಆದರೆ ಮೇ ತಿಂಗಳಲ್ಲಿ ವಾಣಿಜ್ಯ ಸಿಲಿಂಡರ್ 1856.50 ರೂ.ಗೆ ಇಳಿದಿತ್ತು.