ಆರೋಪಿಗಳನ್ನು ಒಳ ಉಡುಪಿನಲ್ಲಿ ನಿಲ್ಲಿಸಿದ ಪೊಲೀಸರು ಅಮಾನತು

ಭೋಪಾಲ್ : ಆರೋಪಿಗಳಾಗಿದ್ದ ಪತ್ರಕರ್ತ, ಯೂಟ್ಯೂಬರ್ ಸೇರಿದಂತೆ ಪುರುಷರ ಗುಂಪನ್ನು ಪೊಲೀಸ್ ಠಾಣೆಯೊಳಗೆ ಕೇವಲ ಒಳ ಉಡುಪಿನಲ್ಲಿ ನಿಲ್ಲಿಸಿದ್ದ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ವೈರಲ್ ಫೋಟೋದಲ್ಲಿ ಪತ್ರಕರ್ತ ಮತ್ತು ಯೂಟ್ಯೂಬರ್ ಸೇರಿದಂತೆ ಪುರುಷರು ಪೊಲೀಸ್ ಠಾಣೆಯೊಳಗೆ ಒಳ ಉಡುಪಿನಲ್ಲಿ ಮಾತ್ರ ಕಾಣಿಸಿಕೊಂಡಿದ್ದರು.

ಈ ಬಗ್ಗೆ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳು ವಿಷಯಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯ ಪ್ರಭಾರಿ ಕೊತ್ವಾಲಿ ಸಿಧಿ ಮತ್ತು ಸಬ್ ಇನ್ಸ್‌ಪೆಕ್ಟರ್ ಅವರನ್ನು ಅಮಾನತುಗೊಳಿಸಿ ಕ್ರಮ ಕೈಗೊಂಡಿದ್ದಾರೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಎಸ್‌ಎಚ್‌ಒ ಮನೋಜ್ ಸೋನಿ ‘ಅವರು ತಮ್ಮ ಬಟ್ಟೆಗಳನ್ನು ಬಳಸಿ ಆತ್ಮಹತ್ಯೆ ಮಾಡಿಕೊಳ್ಳಬಾರದು ಎಂದು ನಾವು ಅವರನ್ನು ಈ ರೀತಿ ಜೈಲಿನಲ್ಲಿ ಇರಿಸಿದ್ದೇವೆ’ ಎಂದು ಸ್ಪಷ್ಟನೆ ನೀಡಿದ್ದಾರೆ.

ಬಿಜೆಪಿ ವಿರೋಧಿ ವಿಷಯವನ್ನು ಪೋಸ್ಟ್ ಮಾಡಿದ ಆರೋಪದಲ್ಲಿ ಯೂಟ್ಯೂಬರ್ ಬಂಧನವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ಪತ್ರಕರ್ತ ಸೇರಿದಂತೆ 8 ಮಂದಿಯನ್ನು ಪೊಲೀಸರು ವಿವಸ್ತ್ರಗೊಳಿಸಿದ್ದರು, ಈ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿ ಹಲವರು ಆಕ್ರೋಶ ಹೊರ ಹಾಕಿದ್ದಾರೆ.

Gayathri SG

Recent Posts

ಗುಜರಾತ್ ವಿರುದ್ಧ ಆರ್‌ಸಿಬಿಗೆ 4 ವಿಕೆಟ್‌ಗಳ ಭರ್ಜರಿ ಜಯ

ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್‌ಸಿಬಿ…

1 hour ago

147 ರನ್​​ಗೆ ಆಲೌಟ್ ಆದ ಗುಜರಾತ್​ ಟೈಟನ್ಸ್​ : ಆರ್​ಸಿಬಿ ವೇಗಿಗಳ ದಾಖಲೆ ಪ್ರದರ್ಶನ

ಚಿನ್ನಸ್ವಾಮಿ​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್​ ಟೈಟನ್ಸ್​ ತಂಡವನ್ನು ರಾಯಲ್​ ಚಾಲೆಂಜರ್ಸ್​ ಬೆಂಗಳೂರು 19.3 ಓವರ್​ಗಳಲ್ಲಿ 147…

1 hour ago

ರಾಜೀನಾಮೆ ನೀಡಿದ ಪೇಟಿಎಂ ಸಿಒಒ ಭವೇಶ್ ಗುಪ್ತಾ

ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…

2 hours ago

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…

2 hours ago

ಬೆಂಗಾವಲು ಪಡೆಯ ವಾಹನದ ಮೇಲೆ ಭಯೋತ್ಪಾದಕರ ದಾಳಿ: ಐವರು ಅಧಿಕಾರಿಗಳಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…

3 hours ago

ಬಿ.ವೈ ರಾಘವೇಂದ್ರ ಪರ ಮತಯಾಚನೆ ನಡೆಸಿದ ವೇದವ್ಯಾಸ್ ಕಾಮತ್

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…

3 hours ago