News Karnataka Kannada
Sunday, May 05 2024
ಮಧ್ಯ ಪ್ರದೇಶ

ಇಂದೋರ್‌ನಲ್ಲಿ ವಿದೇಶಗಳಿಂದ ಬಂದ 8 ಜನರಿಗೆ ಓಮೈಕ್ರಾನ್!

Omicrone
Photo Credit :

ಭೋಪಾಲ್: ಮಧ್ಯಪ್ರದೇಶದ ಇಂದೋರ್‌ನಲ್ಲಿ 8 ಜನರಿಗೆ ಕೊರೊನಾ ವೈರಸ್ ರೂಪಾಂತರ ತಳಿ ಓಮೈಕ್ರಾನ್ ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ಸೋಮವಾರ ಮಾಹಿತಿ ನೀಡಿದೆ. ಇತ್ತೀಚೆಗೆ ವಿದೇಶಗಳಿಂದ ಸುಮಾರು 3 ಸಾವಿರ ಜನರು ಇಂದೋರ್‌ಗೆ ಬಂದಿದ್ದಾರೆ.

ಡಿಸೆಂಬರ್ 17 ಮತ್ತು 21ರ ನಡುವೆ ವಿವಿಧ ದೇಶಗಳಿಂದ ಬಂದಿದ್ದವರೆಲ್ಲರ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ 26 ಜನರಿಗೆ ಕೋವಿಡ್-19 ದೃಢಪಟ್ಟಿದೆ ಮತ್ತು 8 ಜನರಿಗೆ ಓಮೈಕ್ರಾನ್ ಇರುವುದು ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.

ಸೋಂಕಿತರಲ್ಲಿ ಮೂವರು ಅಮೆರಿಕದಿಂದ, ಇಂಗ್ಲೆಂಡ್ ಮತ್ತು ತಾಂಜೇನಿಯಾದ ತಲಾ ಇಬ್ಬರು ಹಾಗೂ ಘಾನಾದಿಂದ ಒಬ್ಬರು ಇಂದೋರ್‌ಗೆ ಬಂದಿದ್ದರು.

ಇದೇ ಮೊದಲ ಬಾರಿಗೆ ಮಧ್ಯ ಪ್ರದೇಶದ ಸರ್ಕಾರ ಅಧಿಕೃತವಾಗಿ ರಾಜ್ಯದ ಓಮೈಕ್ರಾನ್ ಪ್ರಕರಣಗಳನ್ನು ದೃಢಪಡಿಸಿದೆ. ‘ಇಂದೋರ್‌ನಲ್ಲಿ 8 ಓಮೈಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 6 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇನ್ನಿಬ್ಬರಿಗೆ ಚಿಕಿತ್ಸೆ ಮುಂದುವರಿದಿದೆ’ ಎಂದು ಸರ್ಕಾರದ ವಕ್ತಾರ ನರೋತ್ತಮ್ ಮಿಶ್ರಾ ತಿಳಿಸಿದ್ದಾರೆ.

ಏರಿಕೆಯಾಗುತ್ತಿರುವ ಕೋವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ ಡಿಸೆಂಬರ್ 23ರಿಂದ ರಾಜ್ಯದಲ್ಲಿ ರಾತ್ರಿ 11 ಗಂಟೆಯಿಂದ ಬೆಳಗ್ಗೆ 5ರವರೆಗೆ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ಕೋವಿಡ್ ಸ್ಥಿತಿಗತಿಗಳನ್ನು ಆಧರಿಸಿ ಮುಂದಿನ ದಿನಗಳಲ್ಲಿ ಹೆಚ್ಚಿನ ನಿರ್ಬಂಧ ವಿಧಿಸಲಾಗುವುದು ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು