ದೇಶದ ಮೊದಲ ISO ದರ್ಜೆಯ ರಾಣಿ ಕಮಲಾಪತಿ ರೈಲು ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

ಮಧ್ಯಪ್ರದೇಶದ ಭೋಪಾಲ್​ನಲ್ಲಿ ರಾಣಿ ಕಮಲಾಪತಿ ರೈಲು ನಿಲ್ದಾಣವನ್ನು ಪ್ರಧಾನಿ ಮೋದಿ ಉದ್ಘಾಟನೆ ಮಾಡಿದರು.
ಭೋಪಾಲ್​ನಲ್ಲಿರುವ ರಾಣಿ ಕಮಲಾಪತಿ ರೈಲು ನಿಲ್ದಾಣ ಭಾರತದ ಮೊಟ್ಟಮೊದಲ ವಿಶ್ವದರ್ಜೆಯ ರೈಲು ನಿಲ್ದಾಣ ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿದೆ. ವಿಶ್ವದರ್ಜೆಯ ಸೌಕರ್ಯ (ISO certified Railway Station) ಹೊಂದಿರುವ ಈ ನಿಲ್ದಾಣದ ಅಭಿವೃದ್ಧಿಗೆ ಬರೋಬ್ಬರಿ 450 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ.

ಬಳಿಕ ಮಾತನಾಡಿದ ಮೋದಿ, ಈ ಐತಿಹಾಸಿಕ ರೈಲ್ವೆ ನಿಲ್ದಾಣ ಪುನರ್​​ ಅಭಿವೃದ್ಧಿ ಮಾಡಿರುವುದು ಮಾತ್ರವಲ್ಲದೇ ಗಿನ್ನೋರ್​ಗಢದ ರಾಣಿ ಕಮಲಾಪತಿ ಹೆಸರನ್ನು ನಿಲ್ದಾಣಕ್ಕೆ ಇಡುವ ಮೂಲಕ ಅವರ ಹೆಸರು ಮತ್ತಷ್ಟು ಅಜರಾಮರಗೊಳಿಸಲಾಗಿದೆ ಎಂದರು.

ಸ್ವತಂತ್ರ ಭಾರತದ ನಂತರ ಇದೇ ಮೊದಲ ಸಲ ಇಷ್ಟೊಂದು ವೆಚ್ಚದಲ್ಲಿ ರೈಲ್ವೆ ನಿಲ್ದಾಣ ಪುನರ್​ ಅಭಿವೃದ್ಧಿ ಮಾಡಲಾಗಿದ್ದು, ಕಳೆದ ಕೆಲ ವರ್ಷಗಳ ಹಿಂದೆ ಭಾರತೀಯ ರೈಲ್ವೆಯಲ್ಲಿ ಕೆಲಸ ಮಾಡುವ ಉದ್ಯೋಗಿಗಳು ಶಪಿಸುವಂತಹ ಸ್ಥಿತಿ ನಿರ್ಮಾಣಗೊಂಡಿತ್ತು. ಕಿಕ್ಕಿರಿದ ನಿಲ್ದಾಣಗಳು, ಕೊಳಕು ರೈಲು, ಆಸನ-ಊಟ ಮಾಡುವ ಸೌಲಭ್ಯಗಳ ಅನಾನುಕೂಲತೆ ಕಂಡು ಬರುತ್ತಿತ್ತು. ಆದರೆ ಇದೀಗ ಎಲ್ಲವೂ ಬದಲಾಗಿದೆ. ರೈಲಿನಲ್ಲಿ ಪ್ರಯಾಣ ಬೆಳೆಸಲು ಇದೀಗ ಎಲ್ಲರೂ ಉತ್ಸುಕರಾಗಿದ್ದು, ಎಲ್ಲವೂ ಬದಲಾಗಿದೆ ಎಂದರು.

ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್ ಟಿಕೆಟ್‌ಗಳು ಮತ್ತು ಕಾಯ್ದಿರಿಸದ ಟಿಕೆಟ್‌ಗಳನ್ನು ತೆಗೆದುಕೊಳ್ಳಲು ಪ್ರತ್ಯೇಕ ಕೌಂಟರ್‌ಗಳಿವೆ. ಮೆಟ್ರೋ ನಿಲ್ದಾಣಕ್ಕೂ ಈ ನಿಲ್ದಾಣ ಸಂಪರ್ಕ ಕಲ್ಪಿಸಲಿದೆ.ನಿಲ್ದಾಣದಲ್ಲಿ ವಿಶೇಷಚೇತನ ಪ್ರಯಾಣಿಕರಿಗೆ ಮೆಟ್ಟಿಲುಗಳ ಬದಲಿಗೆ ರ‍್ಯಾಂಪ್‌ ಸೌಲಭ್ಯಗಳನ್ನು ಒದಗಿಸಲಾಗಿದೆ. ವಿಶೇಷಚೇತನರಿಗೋಸ್ಕರ ಗಾಲಿಕುರ್ಚಿಗಳ ವ್ಯವಸ್ಥೆಯನ್ನೂ ಮಾಡಲಾಗಿದೆ.

Sneha Gowda

Recent Posts

ಐಪಿಎಲ್ ಪ್ರಸಾರಕರ ಹಿಟ್​ಮ್ಯಾನ್​ ರೋಹಿತ್​ ಕಿಡಿ

ಟೀಮ್​ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಐಪಿಎಲ್ ಬ್ರಾಡ್‌ಕಾಸ್ಟರ್ ಸ್ಟಾರ್ ಸ್ಪೋರ್ಟ್ಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ…

4 mins ago

ಈಶಾನ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿಗಳ ಬಂಡಾಯ ಶಮನ: ವಿಜಯೇಂದ್ರ ಮಾತಕತೆ ಸಕ್ಸಸ್

ಈಶಾನ್ಯ ಪದವೀಧರ ಕ್ಷೇತ್ರ, ನೈಋತ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ…

10 mins ago

ಥಾಯ್ಲೆಂಡ್ ಓಪನ್ 2024: ಸಾತ್ವಿಕ್-ಚಿರಾಗ್ ಜೋಡಿಗೆ ಭರ್ಜರಿ ಗೆಲುವು

ಇಂದು (ಭಾನುವಾರ) ನಡೆದ ಥಾಯ್ಲೆಂಡ್‌ ಓಪನ್‌ ಸೂಪರ್‌ 500 ಬ್ಯಾಡ್ಮಿಂಟನ್‌ ಫೈನಲ್​ ಪಂದ್ಯದಲ್ಲಿ ಗೆದ್ದು ಚಾಂಪಿಯನ್​ ಪಟ್ಟ ಅಲಂಕರಿಸಿದ್ದಾರೆ.

22 mins ago

ಕೇರಳದ ಕೆಲವು ರಾಜ್ಯಗಳಿಗೆ ಮೇ 20 ರವರೆಗೆ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಕೇರಳದ ಪತ್ತನಂತಿಟ್ಟ, ಇಡುಕ್ಕಿ, ಅಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಮೇ 20 ರವರೆಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್…

59 mins ago

ಕೇಜ್ರಿವಾಲ್ ನಿವಾಸದ ಸಿಸಿಟಿವಿ ಡಿವಿಆರ್ ಪೊಲೀಸ್‌ ವಶಕ್ಕೆ

ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡವು ಭಾನುವಾರ…

1 hour ago

5 ದಿನ ಮೀನುಗಾರಿಕೆಗೆ ತೆರಳದಂತೆ ಉತ್ತರ ಕನ್ನಡ ಜಿಲ್ಲಾಡಳಿತ ಸೂಚನೆ

ಮೇ 18 ರಿಂದ ಮೇ 22 ರ ವರೆಗೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ…

1 hour ago