ನಾಳೆ ಪ್ರಧಾನಿ ನರೇಂದ್ರ ಮೋದಿ ಭೂಪಾಲ್‍ ಭೇಟಿ : ರಾಣಿ ಕಮ್ಲಾಪತಿ ರೈಲ್ವೆ ನಿಲ್ದಾಣಕ್ಕೆ ಚಾಲನೆ

ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು  ಮಧ್ಯಪ್ರದೇಶದ ಭೂಪಾಲ್‍ ಭೇಟಿ ನೀಡಲಿದ್ದು, ಮರುನಾಮಕಣಗೊಂಡಿರುವ ರಾಣಿ ಕಮ್ಲಾಪತಿ ರೈಲ್ವೆ ನಿಲ್ದಾಣಕ್ಕೆ ಚಾಲನೆ ನೀಡಲಿದ್ದಾರೆ.

ಭೋಪಾಲ್‌ನಲ್ಲಿರುವ ಹಬೀಬ್‌ಗಂಜ್ ರೈಲು ನಿಲ್ದಾಣವನ್ನು ವಿಶ್ವ ದರ್ಜೆಯ ಮೊದಲ ಮಾದರಿ ನಿಲ್ದಾಣವಾಗಿ ಪರಿವರ್ತಿಸಿದ್ದು, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ಈ ನಿಲ್ದಾಣದಲ್ಲಿ ಲಭ್ಯವಿರಲಿದೆ. ಇದರ ಹೆಸರನ್ನು ಈಗ ಬದಲಾಯಿಸಿ ರಾಣಿ ಕಮ್ಲಾಪತಿ ನಿಲ್ದಾಣ ಎಂದು ಮರುನಾಮಕರಣ ಮಾಡಲಾಗಿದೆ.

ಬುಡಕಟ್ಟು ಜನಾಂಗದ ನಾಯಕ ಮತ್ತು ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ ಸ್ಮರಣಾರ್ಥ ‘ಜನಜಾತಿಯ ಗೌರವ್ ದಿವಸ್’ ಆಚರಿಸಲು ಬುಡಕಟ್ಟು ಸಮಾವೇಶಕ್ಕಾಗಿ ಮಧ್ಯಪ್ರದೇಶದ ಭೋಪಾಲ್‌ಗೆ ಭೇಟಿ ನೀಡುವ ಸಂದರ್ಭದಲ್ಲಿ ಪ್ರಧಾನಿ ಮರುನಾಮಕರಣಗೊಂಡ ರೈಲು ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ.

“ರಾಣಿ ಕಮ್ಲಾಪತಿ ಭೋಪಾಲ್‌ನ ಕೊನೆಯ ಹಿಂದೂ ರಾಣಿ. ಅವಳ ರಾಜ್ಯವನ್ನು ಅಫ್ಘಾನ್ ಕಮಾಂಡರ್ ದೋಸ್ತ್ ಮೊಹಮ್ಮದ್  ಪಿತೂ ಮಾಡಿ ವಶಪಡಿಸಿಕೊಂಡನು. ಗೆಲುವು ಸಾಧ್ಯವಿಲ್ಲ ಎಂಬುದು ಖಚಿತವಾದಾಗ ಆಕೆ ತನ್ನ ಗೌರವವನ್ನು ಉಳಿಸಿಕೊಳ್ಳಲು ‘ಜಲ್ ಜೌಹರ್’ (ಆತ್ಮಹತ್ಯೆ) ಮಾಡಿಕೊಂಡಳು” ಎಂದು  ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಖಾಸಗಿ ಕಂಪನಿಯಿಂದ ನಿರ್ಮಾಣ ಮಾಡಲ್ಪಟ್ಟಿರುವ ಈ ನಿಲ್ದಾಣದ ಸುಮಾರು ₹450 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದೆ. ಇದು ಜರ್ಮನಿಯ ಹೈಡೆಲ್ಬರ್ಗ್ ರೈಲು ನಿಲ್ದಾಣದಂತೆಯೇ ಇದೆ. ಈ ನಿಲ್ದಾಣವು ಫುಡ್ ಕೋರ್ಟ್‌ಗಳು, ರೆಸ್ಟೋರೆಂಟ್‌ಗಳು, ಎಸಿ ಒಳಗೊಂಡ ಕೊಠಡಿಗಳು, ವಿಐಪಿ ಲಾಂಜ್‌ಗಳನ್ನು ಹೊಂದಿದೆ.

ಪ್ಲಾಟ್‌ಫಾರ್ಮ್‌ಗೆ ತಲುಪಲು ನಿಲ್ದಾಣದಲ್ಲಿ ಎಸ್ಕಲೇಟರ್‌ಗಳು ಮತ್ತು ಲಿಫ್ಟ್‌ಗಳನ್ನು ಸಹ ಅಳವಡಿಸಲಾಗಿದೆ. ನಿಲ್ದಾಣದಲ್ಲಿ 24×7 ಕಣ್ಗಾವಲು ಇರಿಸಲು ಸುಮಾರು 160 ಸಿಸಿಟಿವಿಗಳನ್ನು ಸ್ಥಾಪಿಸಲಾಗಿದೆ. ನಿಲ್ದಾಣವು ರೈಲುಗಳ ಮಾಹಿತಿಯ ಮೇಲೆ ವಿವಿಧ ಭಾಷೆಗಳ ಪ್ರದರ್ಶನ ಫಲಕವನ್ನು ಹೊಂದಿರುತ್ತದೆ.

Sneha Gowda

Recent Posts

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ…

39 seconds ago

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

18 mins ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

36 mins ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

52 mins ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

1 hour ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

1 hour ago