News Karnataka Kannada
Wednesday, May 08 2024
ಮಧ್ಯ ಪ್ರದೇಶ

ಪಾಕ್​ ಪರ ಘೋಷಣೆ: ಯುವಕನ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ ಬಂಧಿಸಿದ ಪೊಲೀಸರು

Arrest 22082021
Photo Credit :

ಭೋಪಾಲ್: ಪಾಕ್​ ಪರ ಘೋಷಣೆ ಕೂಗಿದ ಆರೋಪದ ಮೇಲೆ 23 ವರ್ಷದ ಯುವಕನನ್ನು ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಇತ್ತೀಚೆಗೆ ನಡೆದ ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ-20 ವಿಶ್ವಕಪ್ ಕ್ರಿಕೆಟ್​​​ನಲ್ಲಿ, ಪಾಕ್​ ಗೆದ್ದ ಬಳಿಕ ಯುವಕ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾನೆ. ಸತ್ನಾ ಜಿಲ್ಲೆಯ ವಿಶ್ವ ಹಿಂದೂ ಪರಿಷತ್ (ವಿಎಚ್ ಪಿ) ಜಿಲ್ಲಾ ಕಾರ್ಯದರ್ಶಿ ಅನುರಾಗ್ ಮಿಶ್ರಾ ಮತ್ತು ಇತರರು ನೀಡಿದ ದೂರಿನ ಮೇರೆಗೆ ಮೈಹಾರ್ ಪೊಲೀಸ್ ಠಾಣೆಯಲ್ಲಿ ಭಾನುವಾರ ರಾತ್ರಿ ವ್ಯಕ್ತಿಯ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.

ಮೊಹಮ್ಮದ್ ಫಾರೂಕ್(23) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈ ವ್ಯಕ್ತಿಯನ್ನು ಭಾರತೀಯ ದಂಡ ಸಂಹಿತೆ 124-ಎ (ದೇಶದ್ರೋಹ), 153-ಬಿ, 504 ಮತ್ತು 505 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಂಧಿಸಿದ ನಂತರ, ಫಾರೂಕ್​ನನ್ನು ಸೋಮವಾರ ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಜೈಲಿಗೆ ಕಳುಹಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು