ಸತ್ನಾ : ಮದುವೆ ಮಾಡಿಕೊಂಡಿದ್ದ ವಿವಾಹಿತೆಯೋರ್ವಳು ಫೇಸ್ಬುಕ್ ಫ್ರೆಂಡ್ನ್ನು ಪ್ರೀತಿಸಿ ಆತನನ್ನು ಮದುವೆ ಮಾಡಿಕೊಳ್ಳುವ ಉದ್ದೇಶದಿಂದ ಮಧ್ಯಪ್ರದೇಶದಿಂದ ಉತ್ತರಾಖಂಡದ ಹರಿದ್ವಾರಕ್ಕೆ ಹೋಗಿರುವ ಘಟನೆ ನಡೆದಿದೆ.
ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ನಡೆದಿರುವ ಘಟನೆ ಇದಾಗಿದ್ದು, ವೈವಾಹಿಕ ಜೀವನಕ್ಕೆ ಕಾಲಿಟ್ಟು, ಎರಡು ಮಕ್ಕಳಾಗಿರುವ ಮಹಿಳೆ ಈ ರೀತಿಯಾಗಿ ನಡೆದುಕೊಂಡಿದ್ದಾಳೆ. ಫೇಸ್ಬುಕ್ ಫ್ರೆಂಡ್ನೊಂದಿಗೆ ಲವ್ನಲ್ಲಿ ಬಿದ್ದು, ಆತನೊಂದಿಗೆ ಮದುವೆ ಮಾಡಿಕೊಳ್ಳುವ ಉದ್ದೇಶದಿಂದ ಕಳೆದ ಜೂನ್ 28ರಂದು ಮನೆಬಿಟ್ಟು ಪರಾರಿಯಾಗಿದ್ದಳು. ಇದಕ್ಕೆ ಸಂಬಂಧಿಸಿದಂತೆ ಗಂಡನ ಮನೆಯವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಸೈಬರ್ ಕ್ರೈಂ ಮೂಲಕ ಆಕೆಯನ್ನ ಉತ್ತರಾಖಂಡದ ಹರಿದ್ವಾರದಿಂದ ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ವಿವಾಹಿತೆ ಫೇಸ್ಬುಕ್ ಮೂಲಕ ಯುವಕನೋರ್ವನನ್ನ ಪ್ರೀತಿಸಿದ್ದಾಳೆ. ಆತನೊಂದಿಗೆ ಮದುವೆ ಮಾಡಿಕೊಳ್ಳುವ ಉದ್ದೇಶದಿಂದ ಮನೆಬಿಟ್ಟು ತೆರಳಿದ್ದಳು ಎಂದಿದ್ದಾರೆ. ಆದರೆ ಆಕೆಯನ್ನ ರಕ್ಷಣೆ ಮಾಡಿ ಕುಟುಂಬಸ್ಥರಿಗೆ ಒಪ್ಪಿಸಲಾಗಿದೆ ಎಂದಿದ್ದಾರೆ. ಮಗಳು ಕಾಣೆಯಾಗುತ್ತಿದ್ದಂತೆ ಆಕೆಯ ತಂದೆ ಹುಡುಕಿಕೊಟ್ಟವರಿಗೆ 50 ಸಾವಿರ ರೂ. ನಗದು ಹಣ ಘೋಷಣೆ ಮಾಡಿದ್ದರು.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ