ಬಾಕಿ ಕೂಲಿ ಕೇಳಿದ್ದಕ್ಕೆ ಕಾರ್ಮಿಕನ ಕೈ ಕತ್ತರಿಸಿದ ಮಾಲೀಕ, ಮೂವರ ಬಂಧನ

ಮಧ್ಯಪ್ರದೇಶ: ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ಕಾರ್ಮಿಕನೊಬ್ಬ ತನ್ನ ಬಾಕಿ ಕೂಲಿಯನ್ನು ಕೇಳಿದ್ದಕ್ಕೆ ಆತನ ಮಾಲೀಕರು ಕಾರ್ಮಿಕನ ಕೈ ಕತ್ತರಿಸಿದ್ದಾರೆ.ಪರಿಶಿಷ್ಟ ಜಾತಿಗೆ ಸೇರಿರುವ ಸಂತ್ರಸ್ತ ಅಶೋಕ್‌ ಸಾಕೇತ್‌, ಪಾಡ್ರಿ ಗ್ರಾಮದ ನಿವಾಸಿಯಾಗಿದ್ದು ಈ ಮೊದಲು ಡೊಲ್ಮಾವು ಗ್ರಾಮದ ಗಣೇಶ ಮಿಶ್ರಾ ಅವರ ನಿರ್ಮಾಣ ಕೆಲಸದಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದರು.

ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ಹೇಳಿದ್ದಾರೆ.

ಬಾಕಿ ಕೂಲಿಯ ಸಂಬಂಧ ಸಾಕೇತ್‌ ಮತ್ತು ಮಿಶ್ರಾ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಮಾತು ವಿಕೋ‍ಪಕ್ಕೆ ತಿರುಗಿ ಮಿಶ್ರಾ ಮತ್ತು ಆತನ ಕಡೆಯವರು ಹರಿತ ಆಯುಧದಿಂದ ಸಾಕೇತ್‌ ಮೇಲೆ ಹಲ್ಲೆ ನಡೆಸಿದ್ದಾರೆ. ಮಿಶ್ರಾ ಅವರು ಆಯುಧದಿಂದ ಸಾಕೇತ್‌ ಕೈ ಕತ್ತರಿಸಿದ್ದಾರೆ ಎಂದು ಸಹಾಯಕ ಪೊಲೀಸ್‌ ಅಧೀಕ್ಷಕ ಶಿವಕುಮಾರ್‌ ವರ್ಮಾ ಹೇಳಿದರು.

ಮತ್ತೊಬ್ಬ ವ್ಯಕ್ತಿ ಶನಿವಾರ ಮಿಶ್ರಾ ಅವರನ್ನು ಭೇಟಿಯಾಗಿ ಬಾಕಿ ಕೂಲಿಯ ಸಮಸ್ಯೆ ಬಗೆಹರಿಸಿದ್ದಾರೆ ಎಂದೂ ಅವರು ಹೇಳಿದರು.

ರೇವಾ ಜಿಲ್ಲಾ ಕೇಂದ್ರದಿಂದ 40 ಕಿ.ಮೀ. ದೂರದಲ್ಲಿರುವ ಸಿರ್ಮೌರ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಡೊಲ್ಮಾವು ಗ್ರಾಮದಲ್ಲಿ ಶನಿವಾರ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದರು.

ಘಟನೆ ನಡೆದ ಸ್ವಲ್ಪ ಸಮಯದಲ್ಲೇ ಗಾಯಗೊಂಡ ಕಾರ್ಮಿಕನನ್ನು ಪೊಲೀಸರು ಸಂಜಯ ಗಾಂಧಿ ಸ್ಮಾರಕ ಆಸ್ಪತ್ರೆಗೆ ರವಾನಿಸಿದರು. ಅಲ್ಲಿ ವೈದ್ಯರ ತಂಡವೊಂದು ಶಸ್ತ್ರಚಿಕಿತ್ಸೆಯ ಮೂಲಕ ಕಾರ್ಮಿಕನಿಗೆ ಕೈಯನ್ನು ಮರುಜೋಡಿಸಿದರು.

ಬಹಳ ರಕ್ತ ಹೋಗಿದ್ದರಿಂದ ಕಾರ್ಮಿಕನ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿರುವುದಾಗಿ ಶಿವಕುಮಾರ್ ವರ್ಮಾ ಹೇಳಿದರು.

Swathi MG

Recent Posts

ರಾಮೇಶ್ವರಂ ಕೆಫೆ ಸ್ಫೋಟ ​​: ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ನಗರದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಾದ ಮೊಹಮ್ಮದ್ ಮತೀನ್ ಮತ್ತು ಮುಸಾವಿರ್ ಹುಸೇನ್​ಗೆ 14…

4 mins ago

ʻಮಹಾನಟಿ’ ತಂಡದ ವಿರುದ್ಧ ದೂರು ದಾಖಲು..!

ಕಿರುತೆರೆಯ ಖ್ಯಾತ ನಿರೂಪಕಿ,ತುಳುನಾಡ ಕುವರಿ ಅನುಶ್ರೀ, ರಮೇಶ್​ ಅರವಿಂದ್, ಪ್ರೇಮಾ ಅವರುಗಳ ವಿರುದ್ದ ಪ್ರಕರಣ ದಾಖಲಾಗಿದೆ.

41 mins ago

ಪ್ರಜ್ವಲ್‌ ಪ್ರಕರಣಕ್ಕೆ ಸಂಬಂಧಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ವರ್ಗಕ್ಕೆ ಅವಮಾನ ಮಾಡಲಾಗಿದೆ ಎಂದು ಹುಬ್ಬಳ್ಳಿಯಲ್ಲಿ ಪ್ರತಿಭಟನೆ…

55 mins ago

ಫಾದರ್‌ ಮುಲ್ಲರ್‌ ವೈದ್ಯಕೀಯ ಕಾಲೇಜಿನಲ್ಲಿ ಮೂಳೆ ಚಿಕಿತ್ಸೆಯಲ್ಲಿನ ಆಧುನಿಕ ತಂತ್ರಜ್ಞಾನ ಪ್ರದರ್ಶನ

ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಮೂಳೆ ಚಿಕಿತ್ಸಾ ವಿಭಾಗವು ಒಂದು ದಿನದ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮವನ್ನು ಆಯೋಜಿಸಿ ಆರ್ತ್ರೋಸ್ಕೊಪಿ ಬಗೆಗಿನ…

1 hour ago

ಪ್ರಗತಿ ಮೈದಾನದ ಸುರಂಗದಲ್ಲಿ ಅಪಘಾತ : ದೆಹಲಿ ಪೊಲೀಸ್ ಸಿಬ್ಬಂದಿ ಸಾವು

ನಗರದ ಪ್ರಗತಿ ಮೈದಾನದ ಸುಂರಗ ಮಾರ್ಗದಲ್ಲಿ ಅಪಘಾತ ಸಂಭವಿಸಿದ್ದು ದೆಹಲಿ ಪೊಲೀಸ್ ಸಿಬ್ಬಂದಿ ಸಾವನಪ್ಪಿದ್ದಾರೆ. ಅಪಘಾತದ ದೃಶ್ಯ ಕ್ಯಾಮೆರದಲ್ಲಿ ಸೆರೆಯಾಗಿದೆ.…

1 hour ago

ಬೈಂದೂರು ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಪುತ್ತೂರು ಶಾಸಕ ಅಶೋಕ್ ರೈ ನೇಮಕ

ಕರ್ನಾಟಕದಲ್ಲಿ ೨ನೇ ಹಂತದ ಚುನಾವಣಾ ಪ್ರಚಾರಕ್ಕೆ ಉಸ್ತುವಾರಿಗಳ ನೇಮಕವನ್ನು ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ಮಾಡಿದ್ದಾರೆ. ಅದರಂತೆ ಚುನಾವಣೆಗೆ ಉಸ್ತುವಾರಿಗಳ…

2 hours ago