ಮಧ್ಯ ಪ್ರದೇಶ

ಭಗ್ನ ಪ್ರೇಮಿಯೊಬ್ಬ ನ ಸಿಟ್ಟಿಗೆ 7 ಜನ ಸಜೀವ ದಹನ

ಮಧ್ಯಪ್ರದೇಶ :  ಇಂದೋರ್ ನ ವಿಜಯ್ ನಗರ ಪ್ರದೇಶದ ಶನಿವಾರ ಮೂರು ಅಂತಸ್ತಿನ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತ ಏಳು ಜನರನ್ನು ಬಲಿಪಡೆದಿತ್ತು. ಆಕಸ್ಮಿಕ ಅಗ್ನಿ ಅವಘಡ ಎಂದು ಹೇಳಲಾದ ಪ್ರಕರಣ ಈಗ ಬೇರೆಯದ್ದೇ ತಿರುವು ಪಡೆದಿದೆ.

ಈ ಭೀಕರ ಅಗ್ನಿ ದುರಂತದ ಹಿಂದೆ ಪ್ರೇಮ ವೈಫಲ್ಯದ ಕಿಚ್ಚು ಅಡಗಿರುವುದು ಬೆಳಕಿಗೆ ಬಂದಿದೆ. ಪ್ರೇಮ ನಿರಾಕರಣೆಯಿಂದ ನೊಂದ ಭಗ್ನಪ್ರೇಮಿಯೊಬ್ಬ ಪ್ರಿಯತಮೆಯ ವಾಹನಕ್ಕೆ ಹಚ್ಚಿದ ಬೆಂಕಿ, ಇಡೀ ವಸತಿ ಸಮುಚ್ಛಯಕ್ಕೆ ಹಬ್ಬಿ 7 ಜನರನ್ನು ಬಲಿಪಡೆದುಕೊಂಡಿದೆ. 9 ಜನರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. 3 ಮಹಡಿ ಕಟ್ಟಡದಲ್ಲಿ ಶನಿವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿತ್ತು. ನಿದ್ದೆಯ ಮಂಪರಿನಲ್ಲಿದ್ದ ಜನರಿಗೆ ಅರಿವಾಗುವುದರ ಒಳಗೆ ಇಡೀ ಕಟ್ಟಡಕ್ಕೆ ಬೆಂಕಿ ಹತ್ತಿಕೊಂಡಿತ್ತು.
ಕಟ್ಟಡದಲ್ಲಿ ವಿನಾಶಕಾರಿ ಬೆಂಕಿ ಉಂಟುಮಾಡಿ 7 ಜೀವಗಳ ಸಾವಿಗೆ ಕಾರಣವಾದ ಆರೋಪದ ಮೇಲೆ ಶನಿವಾರ ತಡರಾತ್ರಿ 27 ವರ್ಷದ ಯುವಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಶುಭಂ ದೀಕ್ಷಿತ್(27) ತನ್ನನ್ನು ತಿರಸ್ಕರಿಸಿದ ಮಹಿಳೆಗೆ ಸೇರಿದ ವಾಹನವನ್ನು ಸುಟ್ಟು ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ದೀಕ್ಷಿತ್‌ಗಾಗಿ ಹುಡುಕಾಟ ಆರಂಭಿಸಿದ್ದಾರೆ.
ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ತನಿಖೆಗೆ ಆದೇಶಿಸಿದ್ದಾರೆ ಮತ್ತು ಮೃತರ ಮುಂದಿನ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ

Ashika S

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

9 mins ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

18 mins ago

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

29 mins ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

48 mins ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

53 mins ago

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…

1 hour ago