News Karnataka Kannada
Sunday, May 05 2024
ಮಧ್ಯ ಪ್ರದೇಶ

ಮಧ್ಯಪ್ರದೇಶ: ಕೋವಿಡ್ ಲಸಿಕೆ ಪಡೆದು ನಾಲ್ವರು ಬಾಲಕಿಯರು ಅಸ್ವಸ್ಥ

ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಜೆನ್-1 ರೂಪಾಂತರ ಪ್ರಕರಣಗಳ ಸಂಖ್ಯೆ ಏರಿಕೆ ಆಗುತ್ತಿದ್ದ, ಈ ಹಿನ್ನೆಲೆಯಲ್ಲಿ ಜ.3 ರಿಂದ 60 ವರ್ಷ ಮೇಲ್ಪಟ್ಟವರು ಹಾಗೂ ದೀರ್ಘವ್ಯಾಧಿಗಳಿಂದ (ಕೊಮೊರ್ಬಿಡಿಟಿ) ಬಳಲುತ್ತಿರುವವರು ಜಿಲ್ಲಾ ಆಸ್ವತ್ರೆಗಳಲ್ಲಿ ಲಸಿಕೆ ಪಡೆದುಕೊಳ್ಳಬಹುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.
Photo Credit : IANS

ಸತ್ನಾ : ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್-19 ವಿರುದ್ಧದ ಲಸಿಕೆಯನ್ನು ಪಡೆದ 12 ರಿಂದ 14 ವರ್ಷದೊಳಗಿನ ನಾಲ್ವರು ಬಾಲಕಿಯರು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಸದ್ಯ ಇವರೆಲ್ಲರ ಪರಿಸ್ಥಿತಿ ಸ್ಥಿರವಾಗಿದೆ ಎಂದು ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ (ಸಿಎಂಎಚ್‌ಒ) ಡಾ. ಅಶೋಕ್ ಕುಮಾರ್ ಅವ್ಧಿಯಾ ತಿಳಿಸಿದ್ದಾರೆ.

ಆಮ್ದಾರಾ ಪ್ರಾಥಮಿಕ ಕೇಂದ್ರದಲ್ಲಿ ಗುರುವಾರ 12 ರಿಂದ 14 ವರ್ಷದೊಳಗಿನ ಸುಮಾರು 50 ಮಕ್ಕಳಿಗೆ ಲಸಿಕೆ ನೀಡಲಾಗಿತ್ತು. ಇವರಲ್ಲಿ ಸ್ಥಳೀಯ ಶಾಲೆಯಲ್ಲಿ ಓದುತ್ತಿದ್ದ ನಾಲ್ವರು ತಲೆತಿರುಗಿ ಬಿದ್ದಿದ್ದಾರೆ. ಬಹುಶಃ ಭಯದಿಂದಲೇ ಹೀಗಾಗಿರಬಹುದು ಎಂದು ತಿಳಿಸಿದ್ದಾರೆ.

ಕೂಡಲೇ ನಾಲ್ವರನ್ನು ಮೈಹರ್ ಸಿವಿಲ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಸತ್ನಾದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರೆಲ್ಲರೂ ಅಪಾಯದಿಂದ ಪಾರಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದಿದ್ದಾರೆ.

ಘಟನೆ ಬಗ್ಗೆ ಆರೋಗ್ಯ ಇಲಾಖೆ ಮತ್ತು ಜಿಲ್ಲಾಡಳಿತ ತನಿಖೆಗೆ ಸೂಚಿಸಿದೆ. 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ವಿರುದ್ಧದ ಲಸಿಕೆ ನೀಡುವ ಅಭಿಯಾನ ಬುಧವಾರದಿಂದ ಮಧ್ಯಪ್ರದೇಶದಲ್ಲಿ ಆರಂಭಿಸಲಾಗಿದೆ. ಈ ಮಕ್ಕಳಿಗೆ ಕೊರ್ಬೆವ್ಯಾಕ್ಸ್ ಲಸಿಕೆಯನ್ನು ನೀಡಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು