News Karnataka Kannada
Saturday, May 04 2024
ಮಧ್ಯ ಪ್ರದೇಶ

ಮಧ್ಯಪ್ರದೇಶ: ಜನವರಿ 31ರವರೆಗೆ 1ರಿಂದ 12ನೇ ತರಗತಿವರೆಗೆ ಬಂದ್

Shivaraj Chowhan
Photo Credit : News Kannada

ನವದೆಹಲಿ: ಮಧ್ಯಪ್ರದೇಶದಲ್ಲಿ ಜನವರಿ 15ರಿಂದ 31ರವರೆಗೆ ಎಲ್ಲಾ ಖಾಸಗಿ ಮತ್ತು ಸರ್ಕಾರಿ ಶಾಲೆ (1ರಿಂದ 12ನೇ ತರಗತಿ)ಗಳನ್ನು ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬಂದ್ ಮಾಡುವಂತೆ ಶುಕ್ರವಾರ (ಜನವರಿ 14) ಘೋಷಿಸಿದೆ.

ರಾಜ್ಯದಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಯಾವುದೇ ನಿರ್ಬಂಧ ಹೇರಿಲ್ಲ ಎಂದು ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ತಿಳಿಸಿದ್ದಾರೆ.

ಮಧ್ಯಪ್ರದೇಶದಲ್ಲಿ ಶುಕ್ರವಾರ 4,031 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 17,652ಕ್ಕೆ ಏರಿಕೆಯಾಗಿದೆ ಎಂದು ಅಂಕಿಅಂಶ ತಿಳಿಸಿದೆ.

ಶೇ.5.1ರಷ್ಟು ಪಾಸಿಟಿವಿಟಿ ದರ ಇದ್ದು, ಕೋವಿಡ್ ನ ನೂತನ ರೂಪಾಂತರ ತಳಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 3,639ಕ್ಕೆ ಹೆಚ್ಚಳವಾಗಿದೆ. 24ಗಂಟೆಯಲ್ಲಿ 782 ಮಂದಿ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿದ್ದು, ಒಟ್ಟು 7,86,278 ಮಂದಿ ಗುಣಮುಖರಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು