ಮಧ್ಯಪ್ರದೇಶ : ಡಂಪರ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ನಡೆದಿದೆ.
ಇಂದು ಬೆಳಗ್ಗೆ ಪ್ರಯಾಣಿಕರ ಬಸ್ ವೊಂದು ಗ್ವಾಲಿಯರ್ ನಿಂದ ಬರೇಲಿಗೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ 7 ಮಂದಿ ಮೃತಪಟ್ಟಿದ್ದಾರೆ. 15 ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆ ನಡೆದ ಕೂಡಲೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಗೋಹಾದ್ ಚೌಕ್ ಪೊಲೀಸ್ ಠಾಣೆ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.