ಮಧ್ಯಪ್ರದೇಶ: ದುಷ್ಕರ್ಮಿಗಳ ಗುಂಡಿಗೆ ಮೂವರು ಪೊಲೀಸರು ಬಲಿ

ಭೋಪಾಲ್‌: ಶನಿವಾರ ನಸುಕಿನಲ್ಲಿ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಮೂವರು ಪೊಲೀಸರು ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿದ್ದಾರೆ ಎಂದು ಎಂದು ಗೃಹ ಸಚಿವ ನರೋತ್ತಮ್ ಮಿಶ್ರಾ ತಿಳಿಸಿದ್ದಾರೆ.

ರಾಜ್ಯ ರಾಜಧಾನಿಯಿಂದ ಸುಮಾರು 160 ಕಿಮೀ ದೂರದಲ್ಲಿರುವ ಅರಾನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಮುಂಜಾನೆ 3 ಗಂಟೆಯ ಸುಮಾರಿನಲ್ಲಿ ಪೊಲೀಸ್ ಸಿಬ್ಬಂದಿ ದುಷ್ಕರ್ಮಿಗಳನ್ನು ಸೆರೆಹಿಡಿಯಲು ಹೋದಾಗ ಅವರ ಮೇಲೆ ದಾಳಿ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಮ್ಮ ನಿವಾಸದಲ್ಲಿ ಬೆಳಿಗ್ಗೆ 9.30ಕ್ಕೆ ಉನ್ನತ ಮಟ್ಟದ ತುರ್ತು ಸಭೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ (ಸಿಎಂಒ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಡಿಜಿಪಿ, ಗೃಹ ಸಚಿವರು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು, ಮುಖ್ಯ ಕಾರ್ಯದರ್ಶಿ ಮತ್ತಿತರರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಗೊತ್ತಾಗಿದೆ.

‘ಅಪರೂಪದ ನಾಲ್ಕು ಜಿಂಕೆಗಳನ್ನು ಕೆಲವು ದುಷ್ಕರ್ಮಿಗಳು ಕೊಂದಿರುವ ಬಗ್ಗೆ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿ, ಗುನಾ ಜಿಲ್ಲೆಯ ಅರೋನ್ ಪೊಲೀಸ್ ಠಾಣೆ ವ್ಯಾಪ್ತಿಯ ಸ್ಥಳವೊಂದಕ್ಕೆ ತೆರಳಿದ್ದರು. ಪೊಲೀಸ್ ಸಿಬ್ಬಂದಿ ಆರೋಪಿಗಳನ್ನು ಎಲ್ಲಾ ಕಡೆಯಿಂದ ಸುತ್ತುವರೆದಿದ್ದರು. ಆಗ ದುಷ್ಕರ್ಮಿಗಳು ಅವರ ಮೇಲೆ ಗುಂಡು ಹಾರಿಸಿದ್ದಾರೆ. ಈ ವೇಳೆ ಮೂವರು ಪೊಲೀಸರು ಮೃತಪಟ್ಟಿದ್ದಾರೆ. ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರಾಜ್‌ಕುಮಾರ್ ಜಾತವ್ ಮತ್ತು ಕಾನ್‌ಸ್ಟೆಬಲ್‌ಗಳಾದ ನಿಲೇಶ್ ಭಾರ್ಗವ ಮತ್ತು ಶಾಂತಾರಾಮ್ ಮೀನಾ ಅವರು ಗುಂಡಿನ ದಾಳಿಯಲ್ಲಿ ಅಸುನೀಗಿದ್ದಾರೆ’ ಎಂದು ಮಿಶ್ರಾ ಹೇಳಿದ್ದಾರೆ

ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆಗಳನ್ನು ನೀಡಲಾಗಿದೆ ಎಂದು ನರೋತ್ತಮ ಮಿಶ್ರಾ ತಿಳಿಸಿದರು.

Gayathri SG

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

3 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

3 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

3 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

3 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

5 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

5 hours ago