ಕಾಶ್ಮೀರಿ ಪಂಡಿತರ ಮೇಲೆ ನಡೆದ ದೌರ್ಜನ್ಯ ಆಧಾರಿತ ಸಿನಿಮಾ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಮಧ್ಯಪ್ರದೇಶ ಸರ್ಕಾರದಿಂದ ಚಿತ್ರ ವೀಕ್ಷಣೆ ಮಾಡಲು ಅಲ್ಲಿನ ಪೊಲೀಸರಿಗೆ ರಜೆ ಘೋಷಣೆ ಮಾಡಿದೆ.
ಈಗಾಗಲೇ ಸಿನಿಮಾಗೆ ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳು ಈಗಾಗಲೇ ತೆರಿಗೆ ವಿನಾಯತಿ ನೀಡಿದ್ದು, 2 ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಾಣ್ತಿದೆ.
ನಿನ್ನೆ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಈ ಚಿತ್ರಕ್ಕೆ ರಾಜ್ಯದಲ್ಲಿ ತೆರಿಗೆ ವಿನಾಯ್ತಿ ನೀಡುತ್ತಿರುವುದಾಗಿ ಘೋಷಣೆ ಮಾಡಿದ್ದರು. ಇದರ ಬೆನ್ನಲ್ಲೇ ಅಲ್ಲಿನ ಗೃಹ ಸಚಿವ ನರೋತ್ತಮ್ ಮಿಶ್ರಾ, ಸಿನಿಮಾ ವೀಕ್ಷಣೆ ಮಾಡಲು ರಾಜ್ಯದ ಪೊಲೀಸರಿಗೆ ರಜೆ ನೀಡುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇವೆ ಎಂದು ತಿಳಿಸಿದ್ದಾರೆ.
ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಮಾಡಿರುವ ದಿ ಕಾಶ್ಮೀರ್ ಫೈಲ್ಸ್ ಚಿತ್ರದಲ್ಲಿ 1990ರಲ್ಲಿ ಕಾಶ್ಮೀರಿ ಪಂಡಿತರ ಮೇಲೆ ನಡೆದ ದೌರ್ಜನ್ಯದ ವಿಷಯವಾಗಿದೆ. ಈ ಚಿತ್ರಕ್ಕೆ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ಸಹ ವ್ಯಕ್ತಪಡಿಸಿದ್ದಾರೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್‌ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…