ಮಾನಸಿಕ ಅಸ್ವಸ್ಥ ವ್ಯಕ್ತಿಯ ಕಪಾಳಕ್ಕೆ ಹೊಡೆದು ಹತ್ಯೆ: ಆರೋಪಿ ಬಂಧನ

ನೀಮುಚ್‌: ಮಾನಸಿಕ ಅಸ್ವಸ್ಥರಾದ ಹಿರಿಯ ನಾಗರಿಕರೊಬ್ಬನ್ನು ತನ್ನ ಗುರುತಿನ ಚೀಟಿ ತೋರಿಸುವಂತೆ ಒತ್ತಾಯಿಸಿ ಕಪಾಳಕ್ಕೆ ಹೊಡೆದು ಹತ್ಯೆ ಮಾಡಿದ ಆರೋಪಿಯನ್ನು ಮಧ್ಯಪ್ರದೇಶ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಮಾನಸದ ನಿವಾಸಿ ದಿನೇಶ್ ಕುಶ್ವಾಹ (38) ಬಂಧಿತ ಆರೋಪಿ. ಕೊಲೆಯಾದ ಹಿರಿಯ ನಾಗರಿಕ ಭವಾರ್‌ಲಾಲ್‌ ಜೈನ್‌ (65) ರಟ್ಲಾಮ್‌ ಜಿಲ್ಲೆಯ ಸರಸಿ ಗ್ರಾಮದ ನಿವಾಸಿ. ಇವರು ಮೇ 16ರಂದು ಚಿತ್ತೋರ್‌ಗಢದ ಧಾರ್ಮಿಕ ಕಾರ್ಯಕ್ರಮಕ್ಕೆ ಹೋದ ಮೇಲೆ ನಾಪತ್ತೆಯಾಗಿದ್ದರು. ಇವರ ಶವ ಗುರುವಾರ ಸಂಜೆ ನೀಮುಚ್ ಜಿಲ್ಲೆಯ ಮಾನಸ ಪೊಲೀಸ್‌ ಠಾಣೆ ವ್ಯಾಪ್ತಿಯ ರಾಮಪುರ ರಸ್ತೆಯಲ್ಲಿ ಸಿಕ್ಕಿತ್ತು.

ಆರೋಪಿಯು, ಭವಾರ್‌ಲಾಲ್‌ ಜೈನ್‌ ಅವರಿಗೆ ‘ನೀನು ಮೊಹಮ್ಮದ್’ ಎಂದು ಹೆಸರಿಸಿ, ಗುರುತಿಗೆ ಆಧಾರ್‌ ಕಾರ್ಡ್‌ ತೋರಿಸಲು ಒತ್ತಾಯಿಸಿ ಪದೇ ಪದೇ ಕಪಾಳಮೋಕ್ಷ ಮಾಡಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ.

ಶವ ಸಂಸ್ಕಾರದ ಬಳಿಕ ಕುಟುಂಬ ಸದಸ್ಯರಿಗೆ ಜೈನ್‌ ಅವರ ಮೇಲೆ ಉದ್ದೇಶಪೂರ್ವಕ ಹಲ್ಲೆ ನಡೆದಿರುವ ದೃಶ್ಯದ ವಿಡಿಯೊ ಲಭಿಸಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಹುಶಃ ಈ ವಿಡಿಯೊ ಮೇ 19ರಂದು ಚಿತ್ರೀಕರಿಸಲಾಗಿದೆ. ತನಿಖೆ ನಡೆಸಿದಾಗ ಆರೋಪಿಯ ಗುರುತು ಸಿಕ್ಕಿ, ಬಂಧಿಸಲಾಗಿದೆ ಎಂದು ಮಾನಸ ಪೊಲೀಸ್ ಠಾಣೆಯ ಪ್ರಭಾರಿ ಕೆ.ಎಲ್. ಡಾಂಗಿ ತಿಳಿಸಿದ್ದಾರೆ.

ಆರೋಪಿ ಬಿಜೆಪಿಯ ಕಾರ್ಯಕರ್ತ ಎಂದು ಸಂಸದ ಹಾಗೂ ಕಾಂಗ್ರೆಸ್‌ ನಾಯಕ ದಿಗ್ವಿಜಯ ಸಿಂಗ್‌ ಟ್ವಿಟರ್‌ನಲ್ಲಿ ಆರೋಪಿಸಿದ್ದಾರೆ. ಮಧ್ಯಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಕಮಲ್‌ನಾಥ್‌ ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೆಯೇ ಎಂದು ಪ್ರಶ್ನಿಸಿದ್ದಾರೆ.

Gayathri SG

Recent Posts

ಬೀದರ್‌: ಬಿಸಿ ದೋಸೆಯಂತೆ ಮಾರಾಟವಾಗುತ್ತಿದೆ ಎಸಿ, ಕೂಲರ್‌

ಬಿಸಿಲು ಹಾಗೂ ಅದರ ಝಳದಿಂದ ಜನ ಒಂದೆಡೆ ತೀವ್ರ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದರೆ, ಏರ್‌ ಕಂಡಿಷನರ್‌ (ಎಸಿ), ಏರ್‌ ಕೂಲರ್‌ಗಳ…

7 mins ago

ಪರಿಷತ್ ಚುನಾವಣೆಯಲ್ಲೂ ಜೆಡಿಎಸ್ ಜತೆ ಮೈತ್ರಿ ಮುಂದುವರಿಕೆ: ಬಿ.ಎಸ್.ಯಡಿಯೂರಪ್ಪ

ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿಮೈತ್ರಿ ಮುಂದುವರಿಯಲಿದ್ದು, ಮೈತ್ರಿಗೆ ಯಾವುದೇ ಭಂಗ ಆಗುವುದಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ…

23 mins ago

ವೇಣುಗೋಪಾಲಸ್ವಾಮಿ ದೇಗುಲ ಬಳಿ ಅಡ್ಡಾಡುತ್ತಿರುವ ಒಂಟಿ ಗಜ

ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್…

42 mins ago

ಕಾಡಾನೆಯಿಂದ ಬೆಳೆ ನಾಶ: ಮನನೊಂದು ರೈತ ಆತ್ಮಹತ್ಯೆ

ಸಾಲ ಮಾಡಿ ಬೆಳೆದ ಬೆಳೆಯನ್ನು ಕಾಡಾನೆ ಹಿಂಡುಗಳು ನಾಶ ಮಾಡಿದ್ದರಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಳಿಯ ಚಿಕ್ಕಸಾಲಾವರದ ಬಾವಿಕಟ್ಟೆ ಗ್ರಾಮದಲ್ಲಿ ನಡೆದಿದೆ.

44 mins ago

ಬಂಡೀಪುರ ಪ್ರವೇಶದ್ವಾರದ ಬಳಿ ಕೆಟ್ಟು ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ಬಂಡೀಪುರ ಪ್ರವೇಶದ್ವಾರದ ಬಳಿ ಭಾರಿ ವಾಹನ ಕೆಟ್ಟು ನಿಂತ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಯಿತು. ಕಿಲೋಮೀಟರ್ ಗಟ್ಟಲೆ…

59 mins ago

ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ವ್ಯವಸ್ಥೆ ಇಲ್ಲದೆ ಬೆಟ್ಟದ ತಪ್ಪಲಿನಲ್ಲೇ ನಿಂತ ಭಕ್ತರು

ವಾರಾಂತ್ಯದ ರಜೆ ಹಿನ್ನೆಲೆ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಹಸ್ರಾರು ಮಂದಿ ಪ್ರವಾಸಿಗರು ಹಾಗೂ ಭಕ್ತಗಣ ಆಗಮಿಸಿದ್ದರು…

1 hour ago