ರಾಮನವಮಿ ಮೆರವಣಿಗೆ ಮೇಲೆ ಕಲ್ಲು ತೂರಾಟ

ಮಧ್ಯಪ್ರದೇಶದ: ರಾಮ ನವಮಿ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆದ ಘಟನೆ ಮಧ್ಯಪ್ರದೇಶದ ಖಾರ್ಗೋನ್‍ನಲ್ಲಿ ನಡೆದಿದೆ. ಸದ್ಯ ಸ್ಥಳದಲ್ಲಿ ಕರ್ಫ್ಯೂ ವಿಧಿಸಲಾಗಿದೆ.

ಜಿಲ್ಲಾಕೇಂದ್ರದ ಬಳಿಯ ತಾಲಾಬ್ ಚೌಕ್ ಪ್ರದೇಶದಿಂದ ರಾಮನವಮಿ ಮೆರವಣಿಗೆ ಪ್ರಾರಂಭವಾದಾಗ ಕಿಡಿಗೇಡಿಗಳು ಕಲ್ಲು ಎಸೆದು ದಾಂದಲೆ ನಡೆಸಿದ್ದಾರೆ ಅಂಗಡಿಗಳಿಗೆ ಬೆಂಕಿಹಚ್ಚಿ ಭಯದ ವಾತಾವರನ ಸೃಷ್ಠಸಿದರು ಎಂದು ಉದ್ರಿಕ್ತ ಗುಂಪು ಪೋಲಿಸರ ಮೇಲೆ ಹಲ್ಲೆಗೆ ಮುಂದಾದಾಗ ಪರಿಸ್ಥಿತಿಯನ್ನು ನಿಯಂತ್ರಿಸಲು ಪೋಲೀಸರು ಅಶ್ರುವಾಯುಸೆಡಿಸಲಾಯಿತ್ತು.

ಖಾರ್ಗೋನೆ ಪೋಲೀಸ್ ಅೀಧಿಕ್ಷಕ ಸಿದ್ಧಾರ್ಥ್ ಚೌಧರಿ ಮತ್ತು ಇತರ ಇಬ್ಬರು ಪೋಲೀಸ್ ಸಿಬ್ಬಂದಿ ಸೇರಿ ಹಲವು ಜನರು ಗಾಯಗೊಂಡಿದ್ದಾರೆ
ಘಟನೆಯ ನಂತರ, ಇಡೀ ಖಾರ್ಗೋನ್ ನಗರದಲ್ಲಿ ಕಫ್ರ್ಯೂ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ .ಅನುಗ್ರಹ ಹೇಳಿದ್ದಾರೆ.

ವೈದ್ಯಕೀಯ ತುರ್ತು ಪರಿಸ್ಥಿತಿಗಾಗಿ ಮಾತ್ರ ಮನೆಯಿಂದ ಹೊರಬರುವಂತೆ ನಾಗರಿಕರಿಗೆ ತಿಳಿಸಲಾಗಿದೆ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅವರು ಹೇಳಿದರು. ಆಕ್ಷೇಪಾರ್ಹ ಸಂದೇಶಗಳು ಮತ್ತು ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ವೈದ್ಯಕೀಯ ತುರ್ತು ಹೊರತುಪಡಿಸಿ ಯಾವುದೇ ತುರ್ತು ಕೆಲಸಗಳಿಗೆ ಎಸ್ಡಿಎಂ ಕಚೇರಿ, ತಹಸಿಲ್ ಕಚೇರಿ ಮತ್ತು ಕೊತ್ವಾಲಿ ಪೊಲೀಸ್ ಠಾಣೆಯಿಂದ ಅನುಮತಿ ಪಡೆಯಬಹುದು ಎಂದು ಜಿಲ್ಲಾಡಳಿತ ತಿಳಿಸಿದೆ. ಏತನ್ಮಧ್ಯೆ, ಖಾರ್ಗೋನ್ ಜಿಲ್ಲಾಯ ಉಸ್ತುವಾರಿಯೂ ಆಗಿರುವ ರಾಜ್ಯ ಕೃಷಿ ಸಚಿವ ಕಮಲ್ ಪಟೇಲ್ ಗಲಭೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ವಿಭಾಗೀಯ ಆಯುಕ್ತ ಪವನ್ ಶರ್ಮಾ ಮತ್ತು ಡಿಐಜಿ, ನಿರ್ಮಾ ರೇಂಜ, ತಿಲಕ್ ಸಿಂಗ್ ಕೂಡ ಪರಿಸ್ಥಿತಿಯನ್ನು ಅವಲೋಕಿಸಲು ಖಾರ್ಗೋನ್‍ಗೆ ಭೇಟಿ ನೀಡಿದ್ದಾರೆ. ಹಿಂಸಾಚಾರದ ನಂತರ ಮೆರವಣಿಗೆಯು ಮಧ್ಯದಲ್ಲಿಯೇ ಕೈಬಿಡಲಾಯಿತು ಎಂದು ಅವರು ಹೇಳಿದ್ದಾರೆ.

Swathi MG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

3 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

4 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

4 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

4 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

5 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

6 hours ago