ಮಧ್ಯ ಪ್ರದೇಶ

ರೈಲು ಇಂಜಿನ್ ಮೇಲೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಯತ್ನಿಸಿದ ಯುವಕ ಸಾವು

ಛತ್ತರ್‌ಪುರ(ಮಧ್ಯಪ್ರದೇಶ) : ನಿಂತಿದ್ದ ರೈಲಿನ ಇಂಜಿನ್‌ನ ಮೇಲೆ ಸೆಲ್ಫಿ ತೆಗೆಯಲು ಯತ್ನಿಸುತ್ತಿದ್ದಾಗ ಹೈಟೆನ್ಶನ್ ವಿದ್ಯುತ್ ತಂತಿಯ ಸ್ಪರ್ಶದಿಂದ ಯುವಕನೋರ್ವ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಛತ್ತರ್‌ಪುರ ರೈಲು ನಿಲ್ದಾಣದಲ್ಲಿ ಗುರುವಾರ ನಡೆದಿದೆ.

ಮೃತ ಯುವಕನನ್ನು ಸುಹೇಲ್ ಮನ್ಸೂರಿ(16 ) ಎಂದು ಗುರುತಿಸಲಾಗಿದೆ. ಈತ ಬೆಳಗ್ಗೆ ರೈಲ್ವೇ ನಿಲ್ದಾಣಕ್ಕೆ ಹೋಗಿದ್ದನು. ಈ ವೇಳೆ ನಿಂತದ್ದ ರೈಲಿನ ಇಂಜಿನ್ ಮೇಲೆ ಹತ್ತಿ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದಾಗ ವಿದ್ಯುತ್ ಸ್ಪರ್ಶಕ್ಕೆ ಒಳಗಾಗಿದ್ದಾನೆ ಎಂದು ಛತ್ತರ್‌ಪುರ ರೈಲ್ವೇ ಸ್ಟೇಷನ್ ಮಾಸ್ಟರ್ ಶುಭಾಂಕ್ ಪಟೇಲ್ ಹೇಳಿದ್ದಾರೆ.

ಘಟನೆಯಿಂದ ಕುಪಿತಗೊಂಡ ಕೆಲ ಯುವಕರು ಠಾಣಾಧಿಕಾರಿ ಕಚೇರಿಯ ಬಾಗಿಲಿಗೆ ಕಲ್ಲು ತೂರಿ ಹಾನಿ ಮಾಡಿದ್ದಾರೆ. ಅವರು ಸ್ಟೇಷನ್ ಮಾಸ್ಟರ್‌ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರ್‌ಪಿಎಫ್ ಅಧಿಕಾರಿ ತಿಳಿಸಿದ್ದಾರೆ.

ಈ ವೇಳೆ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದರು. ನಂತರ ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು. ಘಟನೆಗೆ ಸಂಬಂಧಿಸಿದಂತೆ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Gayathri SG

Recent Posts

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

20 seconds ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

19 mins ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

24 mins ago

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…

34 mins ago

ಚಾಮರಾಜನಗರ: ಹಾಸನೂರು ಘಾಟ್ ಬಳಿ ಕಾರು ಪಲ್ಟಿ

ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.

54 mins ago

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್…

1 hour ago