ಹೆಣ್ಣು ಮಗು ಹುಟ್ಟಿರುವ ಖುಷಿ: ಗ್ರಾಹಕರಿಗೆ ಹೆಚ್ಚುವರಿ ‘ಉಚಿತ ಪೆಟ್ರೋಲ್’​​ ನೀಡಿದ ಪಂಪ್​ ಮಾಲೀಕ

ಮಧ್ಯಪ್ರದೇಶ : ಮನೆಯಲ್ಲಿ ಹೆಣ್ಣು ಮಗಳು ಹುಟ್ಟಿರುವ ಖುಷಿಯಲ್ಲಿ ಪೆಟ್ರೋಲ್​ ಪಂಪ್​ ಮಾಲೀಕನೋರ್ವ ಗ್ರಾಹಕರಿಗೆ ಹೆಚ್ಚುವರಿಯಾಗಿ ಉಚಿತ ಪೆಟ್ರೋಲ್​​ ನೀಡಿದ್ದಾರೆ.

ಮಧ್ಯಪ್ರದೇಶದ ಬೆತುಲ್​​ದಲ್ಲಿ ಪೆಟ್ರೋಲ್​ ಪಂಪ್​ ಇಟ್ಟುಕೊಂಡಿರುವ ಮಾಲೀಕನೋರ್ವ ಈ ರೀತಿಯಾಗಿ ನಡೆದುಕೊಂಡಿದ್ದಾರೆ. ರಾಜೇಂದ್ರ ಸೈನಿ ಸೊಸೆ ಶಿಖಾ ಅಕ್ಟೋಬರ್​​​ 9ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮಗಳ ಜನನವಾಗುತ್ತಿದ್ದಂತೆ ಸೈನಿ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ನವರಾತ್ರಿ ಹಬ್ಬದಲ್ಲಿ ಹೆಣ್ಣು ಮಗು ಹುಟ್ಟಿರುವ ಕಾರಣ ಲಕ್ಷ್ಮಿಯ ಜನನವಾಗಿದೆ ಎಂದು ಹೇಳಿಕೊಂಡಿದ್ದಾರೆ.

ಮನೆಯಲ್ಲಿ ಹೆಣ್ಣು ಮಗು ಜನನವಾಗುತ್ತಿದ್ದಂತೆ ಪೆಟ್ರೋಲ್​ ಪಂಪ್​ಗೆ ಬರುತ್ತಿರುವ ಗ್ರಾಹಕರಿಗೆ ಹೆಚ್ಚುವರಿಯಾಗಿ ಪೆಟ್ರೋಲ್​ ನೀಡುವ ನಿರ್ಧಾರ ಕೈಗೊಂಡಿದ್ದಾರೆ. ಮಗಳು ಹುಟ್ಟಿದ್ದಕ್ಕಾಗಿ 100 ರೂಪಾಯಿಗೆ 105 ರೂ. ಪೆಟ್ರೋಲ್​ ನೀಡಲಾಗ್ತಿದೆ.ಈ ಆಫರ್​​​​ ಅಕ್ಟೋಬರ್​​ 13 ರಿಂದ 15ರವರೆಗೆ ಬೆಳಗ್ಗೆ 9 ರಿಂದ 11 ಹಾಗೂ ಸಂಜೆ 5 ರಿಂದ 7ರವರೆಗೆ ನೀಡಲಾಗಿತ್ತು. ಇದರ ಹೊರತಾಗಿ ಕೂಡ 100 ರೂ.ಗಿಂತಲೂ ಹೆಚ್ಚಿನ ಪೆಟ್ರೋಲ್​ ಹಾಕಿಸಿಕೊಳ್ಳುವವರಿಗೆ ಶೇ.10ರಷ್ಟು ಹೆಚ್ಚಿನ ಪೆಟ್ರೋಲ್​ ಹಾಕಲಾಗಿದೆ.

ಈ ವಿಚಾರವಾಗಿ ಮಾತನಾಡಿರುವ ರಾಜೇಂದ್ರ ಸೈನಿ, ಮನೆಯಲ್ಲಿ ಹೆಣ್ಣು ಮಗು ಹುಟ್ಟಿದೆ. ಕೋವಿಡ್ ಕಾರಣದಿಂದಾಗಿ ಬೇರೆ ರೀತಿಯಾಗಿ ಸಂಭ್ರಮಾಚರಣೆ ಮಾಡಲು ಸಾಧ್ಯವಿಲ್ಲ. ಹೀಗಾಗಿ, ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Sneha Gowda

Recent Posts

ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್ ಅರ್ಜಿ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…

16 mins ago

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

59 mins ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿಗೆ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

1 hour ago

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

1 hour ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

2 hours ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

2 hours ago