ಮಧ್ಯ ಪ್ರದೇಶ

10 ನಿಮಿಷದಲ್ಲಿ ‘ಝೊಮಾಟೊ ‘ ಡೆಲಿವರಿ ಪ್ಲಾನ್‌ ಬಿಟ್ಟು ಬಿಡಿ

ಭೋಪಾಲ್: ಆಹಾರ ವಿತರಣಾ ಕಂಪನಿ ಝೊಮಾಟೊದ 10 ನಿಮಿಷಗಳಲ್ಲಿ ಮನೆ ಬಾಗಿಲಿಗೆ ಆಹಾರವನ್ನು ತಲುಪಿಸುವ ಭರವಸೆ ನೀಡಿದೆ.

ಆದರೆ ಇದು ರಸ್ತೆಗಳಲ್ಲಿ ವಿತರಣಾ ವ್ಯಕ್ತಿಗಳು ಮತ್ತು ಜನರ ಜೀವಕ್ಕೆ ಅಪಾಯವನ್ನುಂಟುಮಾಡುವಂತಿದೆ ಎಂದಿರುವ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು, ಈ ತ್ವರಿತ ವಿತರಣಾ ಯೋಜನೆಯನ್ನು ಬದಲಾಯಿಸುವಂತೆ ಕಂಪನಿಗೆ ಸೂಚಿಸಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮಿಶ್ರಾ, ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಲು ಜೊಮಾಟೊಗೆ ಅವಕಾಶ ನೀಡುವುದಿಲ್ಲ ಮತ್ತು ತ್ವರಿತ ವಿತರಣೆ ಪ್ರಕ್ರಿಯೆಯಲ್ಲಿ ಸಂಭವಿಸುವ ಸಂಚಾರ ನಿಯಮಗಳ ಉಲ್ಲಂಘನೆ ಮತ್ತು ಅಪಘಾತಗಳಿಗೆ ಕಂಪನಿಯೇ ಹೊಣೆಯಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

“10 ನಿಮಿಷಗಳಲ್ಲಿ ಆಹಾರವನ್ನು ತಲುಪಿಸುವ ಝೊಮಾಟೊ ಯೋಜನೆಯು ತನ್ನ ಉದ್ಯೋಗಿಗಳ(ವಿತರಣಾ ಪಾಲುದಾರರು) ಮತ್ತು ಇತರ ಜನರ ಜೀವನದ ಜೊತೆ ಆಟವಾಡುವಂತಿದೆ. ಝೊಮಾಟೊ ಬಿಡಿ, ಮಧ್ಯಪ್ರದೇಶದಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸಲು ಯಾರಿಗೂ ಅವಕಾಶ ನೀಡುವುದಿಲ್ಲ. ನಾನು ಈ ಯೋಜನೆಗಳನ್ನು ಬದಲಾಯಿಸಲು ಝೊಮಾಟೊಗೆ ಸಲಹೆ ನೀಡುತ್ತಿದ್ದೇನೆ” ಎಂದು ಮಿಶ್ರಾ ಹೇಳಿದ್ದಾರೆ.

ಆಹಾರ ವಿತರಣಾ ವ್ಯಕ್ತಿಗಳು 10 ನಿಮಿಷಗಳಲ್ಲಿ ಡೆಲಿವರಿ ಮಾಡುವುದಕ್ಕಾಗಿ “ಅತುರದಿಂದ ಮತ್ತು ಅಪಾಯಕಾರಿಯಾಗಿ ಚಾಲನೆ ಮಾಡುವ ಮೂಲಕ” ತಲುಪಬಹುದು ಎಂದು ಅವರು ಹೇಳಿದ್ದಾರೆ.

Swathi MG

Recent Posts

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

7 mins ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

17 mins ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

30 mins ago

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

9 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

10 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

11 hours ago