ಮಧ್ಯಪ್ರದೇಶ: ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆಲುವು ಸಾಧಿಸಿದರೆ 300 ಯುನಿಟ್ ವಿದ್ಯುತ್ ಉಚಿತವಾಗಿ ನೀಡುವ ಭರವಸೆಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೀಡಿದ್ದಾರೆ.
ಅರವಿಂದ್ ಕೇಜ್ರಿವಾಲ್ ಅವರು ಮಧ್ಯಪ್ರದೇಶದ ನಿರುದ್ಯೋಗಿ ಯುವಕರಿಗೆ ಮಾಸಿಕ 3,000 ರೂ.ಗಳ ಜೊತೆಗೆ ಉಚಿತ ವಿದ್ಯುತ್, ವೈದ್ಯಕೀಯ ಚಿಕಿತ್ಸೆ ಮತ್ತು ಗುಣಮಟ್ಟದ ಶಾಲೆಗಳ ನಿರ್ಮಾಣ ಸೇರಿದಂತೆ ವಿವಿಧ ಖಾತರಿಗಳನ್ನು ನೀಡಿದ್ದಾರೆ.
ಸತ್ನಾದಲ್ಲಿ ಪಕ್ಷದ ಸಭೆಯನ್ನುದ್ದೇಶಿಸಿ ಮಾತನಾಡಿದ ದೆಹಲಿ ಸಿಎಂ , ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಪರೋಕ್ಷವಾಗಿ ಗೇಲಿ ಮಾಡಿದರು. ಮಧ್ಯಪ್ರದೇಶದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ಗೆ ಸಾಕಷ್ಟು ಅವಕಾಶ ನೀಡಿದ್ದೀರಿ. ದೆಹಲಿ ಮತ್ತು ಪಂಜಾಬ್ನಲ್ಲಿರುವ ನಮ್ಮ ಸರ್ಕಾರವನ್ನು ನೋಡಿ, ನಾವು ಎಲ್ಲಾ ಭರವಸೆಗಳನ್ನು ಪೂರೈಸುತ್ತೇವೆ. ಇದು ಕೇಜ್ರಿವಾಲ್ ಗ್ಯಾರಂಟಿ ಎಂದರು. ಎಎಪಿ ಅಧಿಕಾರಕ್ಕೆ ಬಂದರೆ ನವೆಂಬರ್ 30ರವರೆಗೆ ಬಾಕಿ ಇರುವ ವಿದ್ಯುತ್ ಬಿಲ್ ಮನ್ನಾ ಮಾಡಲಾಗುವುದು ಎಂದರು.