ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚೀತಾ ಸಾವು

ಭೋಪಾಲ್: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ (ಕೆಎನ್‌ಪಿ) ಮತ್ತೊಂದು ಚೀತಾ ಶುಕ್ರವಾರ ಸಾವನ್ನಪ್ಪಿದೆ. ಇದು ಈ ತಿಂಗಳಿನಲ್ಲಿ ಎರಡು ತಿಂಗಳಲ್ಲಿ ಎರಡನೇ ಸಾವಿನ ಪ್ರಕರಣವಾಗಿದೆ. ನಮೀಬಿಯಾದಿಂದ ತರಲಾಗಿದ್ದ ಚೀತಾ ಸೂರಜ್ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದು, ಚಿಕಿತ್ಸೆ ವೇಳೆ ಶುಕ್ರವಾರ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಆಫ್ರಿಕಾದ ಚೀತಾ ತೇಜಸ್ ಮಂಗಳವಾರ ಸಾವನ್ನಪ್ಪಿದ್ದು ಶವಪರೀಕ್ಷೆ ವರದಿಗಳು ಈಗಾಗಲೇ ಹಲವು ಮೂಲಭೂತ ಪ್ರಶ್ನೆಗಳನ್ನು ಹುಟ್ಟುಹಾಕಿವೆ. ಚೀತಾ ಕಡಿಮೆ ತೂಕ ಹೊಂದಿದ್ದು ದೇಹದ ಆಂತರಿಕ ಅಂಗಗಳು ದುರ್ಬಲಗೊಂಡಿವೆ ಎಂದು ವರದಿಗಳು ಹೇಳಿದ್ದವು. ದೇಹ ದುರ್ಬಲವಾಗಿ ಹೆಣ್ಣು ಚೀತಾದೊಂದಿಗಿನ ಹೋರಾಟ ವೇಳೆ ತೇಜಸ್‌ ಆಘಾತಗೊಂಡು ಸಾವನ್ನಪ್ಪಿದೆ ಎಂದು ವರದಿಗಳು ಹೇಳಿವೆ. ಮೇ ತಿಂಗಳಲ್ಲಿ, ಸಿಯಾಯಾ ಎಂಬಚೀತಾಗೆ ಜನಿಸಿದ ನಾಲ್ಕು ಮರಿಗಳಲ್ಲಿ ಮೂರು ಮರಿಗಳು ಅತಿಯಾದ ಶಾಖ, ನಿರ್ಜಲೀಕರಣ, ದುರ್ಬಲ ಆರೋಗ್ಯ ದಿಂದ ಹುಟ್ಟಿದ ಒಂದು ವಾರದಲ್ಲಿ ಸಾವನ್ನಪ್ಪಿದವು. ಆದರೆ, ನಾಲ್ಕನೇ ಮರಿ ಅದೃಷ್ಟವಶಾತ್ ಬದುಕುಳಿದಿದೆ.

ಇದಕ್ಕೂ ಮೊದಲು, ಮಾರ್ಚ್‌ನಲ್ಲಿ ಚೀತಾ ಸಾಶಾ ಮೂತ್ರಪಿಂಡದ ಸಮಸ್ಯೆಯಿಂದ ಸಾವನ್ನಪ್ಪಿತ್ತು. ಏಪ್ರಿಲ್‌ನಲ್ಲಿ ದಕ್ಷಿಣ ಆಫ್ರಿಕಾದ ಚೀತಾ ಉದಯ್ ಹೃದಯ ವೈಫಲ್ಯದಿಂದ ಸಾವನ್ನಪ್ಪಿತು. ಕೆಲ ವಾರ ಬಳಿಕ ಚಿರತೆ ದಕ್ಷ ಗಂಡು ಚೀತಾಗಳೊಂದಿಗಿನ ಘರ್ಷಣೆ ನಂತರ ಸಾವನ್ನಪ್ಪಿತು. ಕುನೊ ರಾಷ್ಟ್ರೀಯ ಉದ್ಯಾನಕ್ಕೆ ಎರಡು ಹಂತಗಳಲ್ಲಿ ಒಟ್ಟು 20 ಚೀತಾಗಳನ್ನು ನಮೀಬಿಯಾದಿಂದ ತರಲಾಗಿತ್ತು. ಮೊದಲ ಹಂತದಲ್ಲಿ, ಎಂಟು ಚೀತಾಗಳನ್ನು ನಮೀಬಿಯಾದಿಂದ ತರಲಾಗಿತ್ತು. ಎರಡನೇ ಹಂತದಲ್ಲಿ ಫೆಬ್ರವರಿ 18ರಂದು ದಕ್ಷಿಣ ಆಫ್ರಿಕಾದಿಂದ 12 ಚೀತಾಗಳನ್ನು ತರಲಾಗಿತ್ತು.

Gayathri SG

Recent Posts

ಉಡುಪಿ: ಇಂದಿನಿಂದ ಮೂರು ದಿನಗಳ ಕರಾವಳಿ ಕಲಾವಿದೆರ್ ತುಳು ನಾಟಕೋತ್ಸವ

ಮಲ್ಪೆಯ ಕರಾವಳಿ ಕಲಾವಿದೆರ್ ತಂಡದಿಂದ ಮೂರು ದಿನಗಳ ತುಳು ನಾಟಕೋತ್ಸವ ಇದೇ ಇಂದಿನಿಂದ (ಮೇ 10) ತೊಟ್ಟಂ ಸಾರ್ವಜನಿಕ ಗಣೇಶೋತ್ಸವ…

1 min ago

ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿದ್ದ 5 ಭಾರತೀಯ ನಾವಿಕರ ಬಿಡುಗಡೆ

ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.

17 mins ago

ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ 99 ಬ್ಯಾಚ್ ನ 25ನೇ ವರ್ಷಾಚರಣೆ

ಪ್ರತಿಷ್ಠಿತ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ತನ್ನ ಮೊದಲ ಎಂ.ಬಿ.ಬಿ. ಎಸ್. ಬ್ಯಾಚ್ 99 ರ ಗುರುವಂದನ ಮತ್ತು 25ನೇ…

27 mins ago

ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…

42 mins ago

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

1 hour ago

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

2 hours ago