ಮಧ್ಯಪ್ರದೇಶ: ಮಧ್ಯಪ್ರದೇಶದಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಟ್ರಕ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. 14 ಮಂದಿ ಗಾಯಗೊಂಡಿದ್ದಾರೆ. ಅಪಘಾತದ ಬಳಿಕ ಬಸ್ಗೆ ಬೆಂಕಿ ಹೊತ್ತಿಕೊಂಡಿತ್ತು, ಕೆಲವರು ಸಜೀವ ದಹನವಾಗಿದ್ದಾರೆ. ವರದಿಗಳ ಪ್ರಕಾರ, ಗುನಾ-ಆರೋನ್ ರಸ್ತೆಯಲ್ಲಿ ಖಾಸಗಿ ಬಸ್ ಡಂಪರ್ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಗಾಯಗೊಂಡ ಪ್ರಯಾಣಿಕರನ್ನು ಸುಟ್ಟ ಗಾಯಗಳ ಚಿಕಿತ್ಸೆಗಾಗಿ ಗುನಾ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.
ರಾತ್ರಿ 9 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದಾಗ ಬಸ್ ಆರೋನ್ ಕಡೆಗೆ ಹೋಗುತ್ತಿದ್ದಾಗ ಡಂಪರ್ ಗುನಾ ಕಡೆಗೆ ಹೋಗುತ್ತಿತ್ತು. ಸುಮಾರು 14 ಜನರನ್ನು ಗುನಾ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುನಾ-ಅರಾನ್ ಮಾರ್ಗದಲ್ಲಿ ಡಂಪರ್ ಮತ್ತು ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ಗೆ ಬೆಂಕಿ ಹೊತ್ತಿಕೊಂಡಿತು.
ಘಟನೆಯ ಸಮಯದಲ್ಲಿ ಬಸ್ನಲ್ಲಿ ಸುಮಾರು 30 ಪ್ರಯಾಣಿಕರಿದ್ದರು ಮತ್ತು ಅವರಲ್ಲಿ ನಾಲ್ವರು ಹೇಗೋ ಬಸ್ನಿಂದ ಹೊರಬಂದು ಮನೆಗೆ ತೆರಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.