ಟ್ರಕ್‌ ಗೆ ಬಸ್‌ ಡಿಕ್ಕಿಯಾಗಿ ಕನಿಷ್ಠ 12 ಮಂದಿ ಸಾವು

ಮಧ್ಯಪ್ರದೇಶ: ಮಧ್ಯಪ್ರದೇಶದಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಟ್ರಕ್​ಗೆ ಬಸ್​ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. 14 ಮಂದಿ ಗಾಯಗೊಂಡಿದ್ದಾರೆ. ಅಪಘಾತದ ಬಳಿಕ ಬಸ್​ಗೆ ಬೆಂಕಿ ಹೊತ್ತಿಕೊಂಡಿತ್ತು, ಕೆಲವರು ಸಜೀವ ದಹನವಾಗಿದ್ದಾರೆ. ವರದಿಗಳ ಪ್ರಕಾರ, ಗುನಾ-ಆರೋನ್ ರಸ್ತೆಯಲ್ಲಿ ಖಾಸಗಿ ಬಸ್ ಡಂಪರ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಗಾಯಗೊಂಡ ಪ್ರಯಾಣಿಕರನ್ನು ಸುಟ್ಟ ಗಾಯಗಳ ಚಿಕಿತ್ಸೆಗಾಗಿ ಗುನಾ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ರಾತ್ರಿ 9 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದಾಗ ಬಸ್ ಆರೋನ್ ಕಡೆಗೆ ಹೋಗುತ್ತಿದ್ದಾಗ ಡಂಪರ್ ಗುನಾ ಕಡೆಗೆ ಹೋಗುತ್ತಿತ್ತು. ಸುಮಾರು 14 ಜನರನ್ನು ಗುನಾ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುನಾ-ಅರಾನ್ ಮಾರ್ಗದಲ್ಲಿ ಡಂಪರ್ ಮತ್ತು ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ಗೆ ಬೆಂಕಿ ಹೊತ್ತಿಕೊಂಡಿತು.

ಘಟನೆಯ ಸಮಯದಲ್ಲಿ ಬಸ್‌ನಲ್ಲಿ ಸುಮಾರು 30 ಪ್ರಯಾಣಿಕರಿದ್ದರು ಮತ್ತು ಅವರಲ್ಲಿ ನಾಲ್ವರು ಹೇಗೋ ಬಸ್‌ನಿಂದ ಹೊರಬಂದು ಮನೆಗೆ ತೆರಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Gayathri SG

Recent Posts

ಮುಸ್ಲಿಂ ಯುವತಿಯೊಂದಿಗೆ ಮದುವೆ : ಖಾಕಿ ವಿರುದ್ಧ ಹಿಂದೂ ಸಂಘಟನೆ ಪ್ರತಿಭಟನೆ

ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದು,…

7 mins ago

ಹಾಸ್ಟೆಲ್‌ ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಪುಣೆಯ (COEP) ಹಾಸ್ಟೆಲ್‌ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್‌ನ ಎಲ್ಲ ವಿದ್ಯಾರ್ಥಿನಿಯರು…

27 mins ago

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…

50 mins ago

ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ : ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು?

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…

1 hour ago

ಡಾ. ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…

1 hour ago

ಲಕ್ನೋ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ 10 ವಿಕೆಟ್​ಗಳ ಭರ್ಜರಿ ಜಯ

ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 57ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ಜೈಂಟ್ಸ್ ತಂಡವನ್ನು ಆತಿಥೇಯ ಸನ್‌ರೈಸರ್ಸ್ ಹೈದರಾಬಾದ್‌ ತಂಡ…

2 hours ago