ಭೋಪಾಲ್: ಸೇತುವೆ ಮೇಲಿನಿಂದ ನದಿಗೆ ಉರುಳಿದ ಬಸ್‌, ಕನಿಷ್ಠ 15 ಸಾವು

ಭೋಪಾಲ್: ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಮಂಗಳವಾರ ಬಸ್ ನದಿಗೆ ಬಿದ್ದ ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 25 ಜನರು ಗಾಯಗೊಂಡಿದ್ದಾರೆ.

ಮೂಲಗಳ ಪ್ರಕಾರ ಸೇತುವೆ ಮೂಲಕ ಸಾಗುತ್ತಿದ್ದ ಬಸ್ ನದಿಗೆ ಉರುಳಿ ಬಿದ್ದಿದೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಜೀವಹಾನಿಯ ಬಗ್ಗೆ ದುಃಖ ವ್ಯಕ್ತಪಡಿಸಿದ ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ, ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲು ಜಿಲ್ಲಾಡಳಿತ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ ಎಂದು ತಿಳಿಸಿದ್ದಾರೆ.

“ಈ ವಿಷಯದ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಲಾಗಿದೆ. ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ರವಾನಿಸಲಾಗಿದೆ” ಎಂದು ಅವರು ಹೇಳಿದರು.

Gayathri SG

Recent Posts

ತಮಿಳಿನ ಯುವ ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್ ನಿಧನ

ಹೊಸ ಹೊಸ ಆಲೋಚನೆಗಳ ಮೂಲಕ ಸಂಗೀತ ಪ್ರಿಯರನ್ನು ರಂಜಿಸಿದ್ದ ತಮಿಳಿನ ಯುವ ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್ ನಿಧನರಾಗಿದ್ದಾರೆ.

3 mins ago

ಕೋವಿಶೀಲ್ಡ್ ಪಡೆದ ಬಳಿಕ ಭಾರತದ ಇಬ್ಬರು ಹೆಣ್ಮಕ್ಕಳು ಸಾವು !

ಕೊರೊನಾ ಸಮಯದಲ್ಲಿ ಭಾರೀ ಸುದ್ದಿಯಲ್ಲಿದ್ದ ಔಷಧಿಗಳ ತಯಾರಿಕಾ ಸಂಸ್ಥೆ Oxford-AstraZeneca, ಆಘಾತಕಾರಿ ಮಾಹಿತಿ ಒಂದನ್ನು ಕೊನೆಗೂ ಕೋರ್ಟ್​ ಮುಂದೆ ಒಪ್ಪಿಕೊಂಡಿದೆ.

9 mins ago

ಏಳು ವರ್ಷಗಳ ಬಳಿಕ ಲಕ್ಷದ್ವೀಪದಿಂದ ಮಂಗಳೂರಿಗೆ ಬಂದ ಪ್ರಯಾಣಿಕ ಹಡಗು

ಏಳು ವರ್ಷಗಳ ಬಳಿಕ ಮತ್ತೆ ಮಂಗಳೂರು ಲಕ್ಷದ್ವೀಪದ ನಡುವೆ ಹೈಸ್ಪೀಡ್ ಹಡಗು ಸಂಚಾರ ಆರಂಭವಾಗಿದ್ದು, ಗುರುವಾರ ಸಂಜೆ ಲಕ್ಷದ್ವೀಪದಿಂದ 150ಕ್ಕೂ…

18 mins ago

ಬೃಹತ್ ಗಾತ್ರದ ಮರ ಬಿದ್ದು ಹೊಸ ಕಾರು ಜಖಂ

ನಿಂತಿದ್ದ ಹೋಂಡಾ ಎಲಿವೇಟ್ SUV ಬ್ರಾಂಡ್ ಹೊಸ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದ ಘಟನೆ ಲಾವೆಲ್ಲೇ ರೋಡ್​ನಲ್ಲಿ ನಡೆದಿದೆ.

38 mins ago

ಈ ನಾಯಕನ ರಾಸಲೀಲೆಗೆ ವರ್ಷಕ್ಕೆ 25 ಹುಡುಗಿಯರು ಬೇಕಂತೆ!

ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಉನ್ ಅವರು ತನ್ನ ವಿಚಿತ್ರ ನಿರ್ಧಾರಗಳಿಂದಲೇ ಸುದ್ದಿಯಾದವರು.ಸದ್ಯ ಇವರ ಮೇಲೆ ಯೆನ್ಮಿ ಪಾರ್ಕ್…

47 mins ago

ಕಬಕದಲ್ಲಿ ಸರಣಿ ಅಪಘಾತ: ಆ್ಯಂಬುಲೆನ್ಸ್ ಗೆ ಡಿಕ್ಕಿ ಹೊಡೆದ ಕಾರು

ಮಂಗಳೂರಿಗೆ ರೋಗಿಯನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸಿಗೆ ನ್ಯಾನೋ ಕಾರು ಡಿಕ್ಕಿ ಹೊಡೆದಿದ್ದು, ನ್ಯಾನೋ ಕಾರಿಗೆ ಮಂಗಳೂರಿನಿಂದ ಬರುತ್ತಿದ್ದ ಮತ್ತೊಂದು ಕಾರು ಡಿಕ್ಕಿಯಾದ…

56 mins ago