ಭೋಪಾಲ್: ಉಜ್ಜಯಿನಿಯ ಮಹಾಕಾಲ ದೇವಳದಲ್ಲಿ ಧರೆಗುರುಳಿದ ಸಪ್ತರ್ಷಿಗಳ ಪ್ರತಿಮೆ

ಭೋಪಾಲ್: ಉಜ್ಜಯಿನಿಯ ‘ಮಹಾಕಲ್ ಲೋಕ’ ಕಾರಿಡಾರ್‌ನಲ್ಲಿ ಸ್ಥಾಪಿಸಲಾದ ಏಳು ಸಪ್ತರ್ಷಿ ಪ್ರತಿಮೆಗಳು ಭಾರಿ ಗಾಳಿಗೆ ಕೆಳಗುರುಳಿವೆ. ಈ ಪ್ರದೇಶದಲ್ಲಿ ಭಾನುವಾರ 65 ಕಿ.ಮೀ ವೇಗದ ವೇಗದ ಗಾಳಿ, ಮಳೆ, ಗುಡುಗು ಕಾಣಿಸಿಕೊಂಡಿದ್ದು, ಪ್ರಾಕೃತಿಕ ವಿಕೋಪದಿಂದ ಪ್ರತಿಮೆಗಳು ಕೆಳಗುರುಳಿವೆ.

ಭಾರಿ ಬಿರುಗಾಳಿಗೆ ಸಹಿತ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಬೃಹತ್ ಮೂರ್ತಿಗಳು ಪತನಗೊಂಡ ನಂತರ, ಆವರಣದಲ್ಲಿ ಭಕ್ತರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

856 ಕೋಟಿ ರೂಪಾಯಿಗಳ (ಎರಡು ಹಂತದ ಯೋಜನೆಯ ಒಟ್ಟು ವೆಚ್ಚ) ‘ಮಹಾಕಲ್ ಲೋಕ’ ಕಾರಿಡಾರ್ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 11, 2022 ರಂದು ಅನಾವರಣಗೊಳಿಸಿದ್ದರು. ಯೋಜನೆಯ ಎರಡನೇ ಹಂತವು 2024 ರ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಮಧ್ಯಪ್ರದೇಶ ಸರ್ಕಾರ ತಿಳಿಸಿದೆ.

ರಾಜ್ಯ ಕಾಂಗ್ರೆಸ್ ನಾಯಕತ್ವವು ಪ್ರತಿಮೆಗಳ ಕುಸಿದಿರುವ ಬಗ್ಗೆ ಪ್ರಶ್ನೆ ಎತ್ತಿದ್ದು, ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಬಿಜೆಪಿ ಸರ್ಕಾರವು ಮಹಾಕಾಲ್ ಲೋಕ ಕಾರಿಡಾರ್ ಅಭಿವೃದ್ಧಿ ಕಾಮಗಾರಿಯಲ್ಲಿ ಭ್ರಷ್ಟಾಚಾರ ಮಾಡಿದೆ ಎಂದು ಆರೋಪಿಸಿದ್ದು, ತನಿಖೆಗೆ ಒತ್ತಾಯಿಸಿದೆ. ಪ್ರತಿಮೆಗಳನ್ನು ಸ್ಥಾಪಿಸಿ ಒಂದು ವರ್ಷದೊಳಗೆ ಪತನಗೊಂಡಿರುವ ಕುರಿತು ಸತ್ಯ ಅರಿಯಲು ವಿರೋಧ ಪಕ್ಷವು ಪಕ್ಷದ ಹಿರಿಯ ನಾಯಕರ ಏಳು ಸದಸ್ಯರ ಸಮಿತಿಯನ್ನು ರಚಿಸಿದೆ.

Ashika S

Recent Posts

ನಾಳೆ ದಾವಣಗೆರೆಗೆ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಭೇಟಿ

ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ನಾಳೆ ಮೇ ಮೂರರಂದು ದಾವಣಗೆರೆಗೆ ಆಗಮಿಸುತ್ತಿದ್ದಾರೆ.

2 hours ago

ಕಾರ್ಮಿಕರನ್ನು ಮತ್ತೆ ಗುಲಾಮಗಿರಿಯತ್ತ ತಳ್ಳುವ ಹುನ್ನಾರ ನಡೆಸುತ್ತಿದೆ: ಸುನಿಲ್ ಕುಮಾರ್ ಬಜಾಲ್

ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಅಂದಿನ ಕಾರ್ಮಿಕ ವರ್ಗ ಇಂದು ಮತ್ತೆ ದೇಶವನ್ನು ಉಳಿಸಲು ಸನ್ನದ್ದವಾಗಬೇಕು.ಕಳೆದ 10…

2 hours ago

ಮಲೆಮಹದೇಶ್ವರನ ಹುಂಡಿಯಲ್ಲಿ 3.05 ಕೋಟಿ ಕಾಣಿಕೆ ಸಂಗ್ರಹ

ಪವಾಡ ಪುರುಷ ಮಲೆ ಮಹದೇಶ್ವರ ಕೋಟಿ ಒಡೆಯನಾಗಿ ಮುಂದುವರೆಯುತ್ತಿದ್ದು, ಇದೀಗ 34 ದಿನಗಳ ಅಂತರದಲ್ಲಿ ಮೂರು ಕೋಟಿ ನಾಲ್ಕು ಲಕ್ಷದ…

2 hours ago

ಪ್ರಜ್ವಲ್ ವಿದೇಶಕ್ಕೆ ಹೋಗಲು ಕ್ಲಿಯರೆನ್ಸ್ ಕೊಟ್ಟವರು ಯಾರು: ಸಲೀಂ ಅಹ್ಮದ್

ಅಶ್ಲೀಲ ವೀಡಿಯೋ ಪ್ರಕರಣ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿದ್ದು, ಅವರಿಗೆ ಕ್ಲಿಯರೆನ್ಸ್ ಕೊಟ್ಟವರು ಯಾರು ಎಂಬುದರ…

4 hours ago

ಸಿಎನ್ ಜಿ ಇಂಧನ ನಿರಂತರ ಪೂರೈಕೆಗೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯಕ್ಕೆ ಯಶ್ ಪಾಲ್ ಸುವರ್ಣ ಮನವಿ

ಉಡುಪಿ ಜಿಲ್ಲೆಯಾದ್ಯಂತ ಸಿ ಎನ್ ಜಿ ಬಂಕ್ ಗಳಲ್ಲಿ ಇಂಧನ ಕೊರತೆಯಿಂದ ರಿಕ್ಷಾ ಚಾಲಕರು ಗಂಟೆಗಟ್ಟಲೆ ಇಂಧನಕ್ಕಾಗಿ ಕಾಯುವ ಸನ್ನಿವೇಶ…

4 hours ago

ಲಕ್ಷ್ಮೀ ಹೆಬ್ಬಾಳಕರ್ ಮನೆಗೆ ಬಂದು ಕೃತಜ್ಞತೆ ಸಲ್ಲಿಸಿದ ನೇಹಾ ಹಿರೇಮಠ ತಂದೆ-ತಾಯಿ

ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ ಮಾಡಿಸಿಕೊಟ್ಟಿರುವುದಕ್ಕಾಗಿ ನೇಹಾ ಹಿರೇಮಠ…

4 hours ago