ಮಧ್ಯಪ್ರದೇಶ: ಮಧ್ಯಪ್ರದೇಶದ ಹರ್ದಾ ಜಿಲ್ಲೆಯ ಬೈರಾಗರ್ ಗ್ರಾಮದ ಪಟಾಕಿ ಕಾರ್ಖಾನೆಯಲ್ಲಿ ಇಂದು ಬೆಳಗ್ಗೆ ಸ್ಫೋಟ ಸಂಭವಿಸಿದೆ. ಬೆಳಿಗ್ಗೆ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 11 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಸುಮಾರು 60 ಮಂದಿ ಗಾಯಗೊಂಡಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಜನರನ್ನು ಸ್ಥಳಾಂತರಿಸುವ ಕಾರ್ಯ ನಡೆಸುತ್ತಿದೆ.
ಇನ್ನು ಘನಟನೆಯಲ್ಲಿ ಹಲವು ಕಾರ್ಮಿಕರಿಗೆ ಗಂಭೀರವಾದಂತಹ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.ಪಟಾಕಿ ಕಾರ್ಖಾನೆಯಲ್ಲಿ 11 ರಿಂದ 15 ಬಾರಿ ಸ್ಪೋಟಗಳು ಸಂಭವಿಸಿವೆ. ಕಾರ್ಖಾನೆಯಲ್ಲಿ 30ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ.