ಕಾಂಗ್ರೆಸ್‌ ಈಗ ಅರ್ಬನ್‌ ನಕ್ಸಲರಿಂದ ನಡೆಸಲ್ಪಡುವ ಪಕ್ಷ: ಪ್ರಧಾನಿ ಮೋದಿ

ಭೋಪಾಲ್: ಕಾಂಗ್ರೆಸ್ ನಾಯಕರು ಬೆಳ್ಳಿ ಚಮಚದೊಂದಿಗೆ ಜನಸಿದ್ದು, ಅವರಿಗೆ ಬಡವರು ವಾಸ ಮಾಡುವ ಕಾಲನಿಗಳು ಪಕ್‌ ನಿಕ್‌ ತಾಣಗಳಾಗಿ ಮಾರ್ಪಟ್ಟಿವೆ. ಬಡ ರೈತರ ಹೊಲಗಳು ಕಾಂಗ್ರೆಸ್ ನಾಯಕರಿಗೆ ವಿಡಿಯೊ ಚಿತ್ರೀಕರಣದ ಸ್ಥಳಗಳಾಗಿವೆ. ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಸೋಮವಾರ) ಮಧ್ಯಪ್ರದೇಶದಲ್ಲಿ ಬಿಜೆಪಿಯ ಮೆಗಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ್ದು , ಪ್ರತಿಪಕ್ಷಗಳ ಘಮಾಂಡಿಯಾ (ಅಹಂಕಾರಿ) ಮೈತ್ರಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಪಕ್ಷ ಮತ್ತೆ ಅಧಿಕಾರಕ್ಕೆ ಬಂದರೆ ಬಿಜೆಪಿ ಎಲ್ಲ ಗ್ಯಾರಂಟಿಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಶಾಸಕಾಂಗಗಳಲ್ಲಿ ಮಹಿಳೆಯರಿಗೆ 33% ಸ್ಥಾನಗಳನ್ನು ಮೀಸಲಿಡುವ ಹೊಸ ಶಾಸನವನ್ನು ಉಲ್ಲೇಖಿಸಿದ ಅವರು ಘಮಾಂಡಿಯಾ ಒಕ್ಕೂಟವು ಮಹಿಳಾ ಮೀಸಲಾತಿ ಮಸೂದೆಯನ್ನು ಇಷ್ಟವಿಲ್ಲದೆ ಬೆಂಬಲಿಸಿತು” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಕಾಂಗ್ರೆಸ್ ಈಗ ಅರ್ಬನ್ ನಕ್ಸಲರಿಂದ ನಡೆಸಲ್ಪಡುತ್ತದೆ. ಘೋಷಣೆಗಳಿಂದ ಹಿಡಿದು ನೀತಿ ರೂಪಿಸುವವರೆಗೆ ಕಾಂಗ್ರೆಸ್ ಈಗ ಎಲ್ಲವನ್ನೂ ಅರ್ಬನ್ ನಕ್ಸಲರಿಗೆ ಹೊರಗುತ್ತಿಗೆ ನೀಡುವ ಕಂಪನಿಯಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ. ಮಧ್ಯಪ್ರದೇಶದ ಹಿಂದಿನ ಕಾಂಗ್ರೆಸ್ ಸರ್ಕಾರಗಳು ಚುನಾವಣಾ ಭರವಸೆಗಳನ್ನು ಈಡೇರಿಸಿಲ್ಲ. ಎಲ್ಲಾ ಭರವಸೆಗಳನ್ನು ಈಡೇರಿಸುವುದು ಮೋದಿಯವರ ಗ್ಯಾರಂಟಿ. ಕಾಂಗ್ರೆಸ್‌ಗಿಂತ ಭಿನ್ನವಾಗಿ ತನ್ನ ಪಕ್ಷವು ನೀಡುವ ಎಲ್ಲಾ ಭರವಸೆಗಳನ್ನು ಈಡೇರಿಸುತ್ತದೆ ಎಂದು ಮೋದಿ ಹೇಳಿದರು.

Ashika S

Recent Posts

ನಿಮ್ಮ ಡಲ್‌ಸ್ಕಿನ್‌ಗೆ ಇದು ಬೆಸ್ಟ್‌ ಪಾನೀಯ : ಎರಡು ವಾರದಲ್ಲೆ ಉತ್ತಮ ರಿಸಲ್ಟ್‌

ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್‌ಸ್ಕಿನ್‌ ಇರುವವರೂ…

5 mins ago

ಇಂದು 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…

23 mins ago

ಇಂದಿನ ರಾಶಿ ಭವಿಷ್ಯ : ಈ ರಾಶಿಯವರಿಗೆ ಹೊಸ ಉದ್ಯೋಗ ಆಫರ್ ಬರಲಿದೆ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…

33 mins ago

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

8 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

9 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

9 hours ago