ತಂದೆ ಮದ್ಯಪಾನ ಮಾಡಿ ತಾಯಿಗೆ ಥಳಿತ: ನೊಂದು ಮಗಳು ಆತ್ಮಹತ್ಯೆ

ಖಾರ್‌ಗೋನ್‌: ಮದ್ಯಪಾನ ಮಾಡಿ ತಾಯಿಗೆ ಥಳಿಸುತ್ತಿದ್ದ ತಂದೆಯ ವರ್ತನೆಯಿಂದ ಬೇಸರಗೊಂಡು 17 ವರ್ಷದ ಬಾಲಕಿಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಖಾರ್‌ಗೋನ್‌ ಜಿಲ್ಲೆಯಲ್ಲಿ ನಡೆದಿದೆ ಎಂದು ಬರ್ವಾ ಪೊಲೀಸ್‌ ಠಾಣೆಯ ಉಸ್ತುವಾರಿ ನಿರ್ಮಲ್ ಶ್ರೀನಿವಾಸ್ ತಿಳಿಸಿದ್ದಾರೆ.

ಪತ್ರ ಬರೆದಿಟ್ಟು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನನ್ನ ತಂದೆ ನಿತ್ಯ ಕುಡಿದು ಬಂದು ತಾಯಿಯ ಮೇಲೆ ದೌರ್ಜನ್ಯ ಎಸಗುತ್ತಿದ್ದರು. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ ಎಂದು ಹೇಳಿದ್ದಾಳೆ.

ಪೊಲೀಸರು ಕ್ರಮ ತೆಗೆದುಕೊಂಡಿಲ್ಲ ಎನ್ನುವ ಆರೋಪವನ್ನು ನಿರಾಕರಿಸಿರುವ ನಿರ್ಮಲ್, ದೂರು ಬಂದ ಬಳಿಕ ಅವರಿಂದ ಮುಚ್ಚಳಿಕೆ ಬರೆಯಿಸಿ ಕಳುಹಿಸಿದ್ದೆವು ಎಂದು ಹೇಳಿದ್ದಾರೆ.

ಈ ಹಿಂದೆ ದೂರು ನೀಡಿದಾಗ ಪೊಲೀಸರು ಬಾಲಕಿಯ ತಂದೆಯನ್ನು ಬಂಧಿಸಿದ್ದರು. ಈಗ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಖಾರ್‌ಗೋನ್‌ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಧರ್ಮರಾಜ್ ಮೀನಾ ತಿಳಿಸಿದ್ದಾರೆ.

Chaitra Kulal

Recent Posts

ಪ್ಲೇ-ಆಫ್​ ರೇಸ್​ನಿಂದ ಹೊರ ಬಿದ್ದ ಪಂಜಾಬ್ ​: ಆರ್‌ಸಿಬಿ ಪಾಯಿಂಟ್ಸ್ ಎಷ್ಟು ?

ಐಪಿಎಲ್​ ಟೂರ್ನಿಯಲ್ಲಿ ಆರ್​ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್​ಗಳಿಂದ ಸೋಲಿಸುವ ಮೂಲಕ,…

8 mins ago

ಉಡುಪಿ: ಇಂದಿನಿಂದ ಮೂರು ದಿನಗಳ ಕರಾವಳಿ ಕಲಾವಿದೆರ್ ತುಳು ನಾಟಕೋತ್ಸವ

ಮಲ್ಪೆಯ ಕರಾವಳಿ ಕಲಾವಿದೆರ್ ತಂಡದಿಂದ ಮೂರು ದಿನಗಳ ತುಳು ನಾಟಕೋತ್ಸವ ಇದೇ ಇಂದಿನಿಂದ (ಮೇ 10) ತೊಟ್ಟಂ ಸಾರ್ವಜನಿಕ ಗಣೇಶೋತ್ಸವ…

13 mins ago

ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿದ್ದ 5 ಭಾರತೀಯ ನಾವಿಕರ ಬಿಡುಗಡೆ

ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.

29 mins ago

ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ 99 ಬ್ಯಾಚ್ ನ 25ನೇ ವರ್ಷಾಚರಣೆ

ಪ್ರತಿಷ್ಠಿತ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ತನ್ನ ಮೊದಲ ಎಂ.ಬಿ.ಬಿ. ಎಸ್. ಬ್ಯಾಚ್ 99 ರ ಗುರುವಂದನ ಮತ್ತು 25ನೇ…

39 mins ago

ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…

54 mins ago

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

1 hour ago