ಮಧ್ಯಪ್ರದೇಶ: ಪೋಷಕರ ಹಣೆಗೆ ಗನ್ ಇಟ್ಟುಅವರ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದಿದೆ.
ಅತ್ಯಾಚಾರ ನಡೆಸಿದ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಸೋಮವಾರ ರಾತ್ರಿ ಭನ್ವಾರ್ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಆದರೆ ಎರಡು ದಿನಗಳ ನಂತರ ದೂರು ದಾಖಲಿಸಲಾಗಿದೆ. ಒಬ್ಬ ಶಂಕಿತನನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ರಿಷಿಕೇಶ್ ಮೀನಾ ತಿಳಿಸಿದ್ದಾರೆ.
ಬಾಲಕಿಯ ಕುಟುಂಬವು ಒಂದು ತಿಂಗಳ ಹಿಂದೆಯಷ್ಟೇ ಆ ಪ್ರದೇಶಕ್ಕೆ ತೆರಳಿತ್ತು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.