ಮಧ್ಯಪ್ರದೇಶ: ಮಧ್ಯಪ್ರದೇಶದ ವಿದಿಶಾದಲ್ಲಿ ಅಚ್ಚರಿಯ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ಮಹಿಳೆಯೊಬ್ಬರು ನಾಲ್ಕು ಕಾಲುಗಳಿರುವ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮಗು ಆರೋಗ್ಯವಾಗಿದ್ದಾಳೆ. ಆದರೆ ವೈದ್ಯರು ಬಾಲಕಿಯನ್ನು ಉತ್ತಮ ಚಿಕಿತ್ಸೆಗಾಗಿ ಭೋಪಾಲ್ಗೆ ಕಳುಹಿಸಿದ್ದಾರೆ ಎಂದು ವರದಿಯಾಗಿದೆ.
ಈ ಮಗುವಿನ ತಾಯಿಯ ಹೆಸರು ಧನುಷ್ ಬಾಯಿ ಮತ್ತು ತಂದೆಯ ಹೆಸರು ಫೂಲ್ ಸಿಂಗ್ ಪ್ರಜಾಪತಿ. ಬಮೋರಾ ಸರ್ಕಾರಿ ಆಸ್ಪತ್ರೆಯಲ್ಲಿ ಧನುಷ್ ಬಾಯಿ ಈ ಮಗುವಿಗೆ ಜನ್ಮ ನೀಡಿದ್ದಾರೆ. ಸದ್ಯ ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಚರ್ಚೆಗೆ ಗ್ರಾಸವಾಗಿದೆ. ಡಾ.ರಾಜೇಶ್ ಪ್ರಕಾರ, ಈ ರೀತಿಯ ಪ್ರಕರಣವನ್ನು ವೈದ್ಯಕೀಯ ಭಾಷೆಯಲ್ಲಿ ‘ಈಸಿಯೋಪಾಗಸ್’ ಎಂದು ಕರೆಯಲಾಗುತ್ತದೆ.