ಮಧ್ಯ ಪ್ರದೇಶ

ಬೆಳ್ಳುಳ್ಳಿಗೆ ಈಗ ಚಿನ್ನದ ಬೆಲೆ; ಜಮೀನಿಗೆ ಸಿಸಿ ಕ್ಯಾಮೆರಾ ಅಳವಡಿಸಿದ ರೈತರು

ಮಧ್ಯಪ್ರದೇಶ: ಸಾಮಾನ್ಯವಾಗಿ ಮನೆ, ಕಚೇರಿ, ಅಂಗಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿರುವುದು ನೋಡಿದ್ದೇವೆ, ಆದರೆ ಇಲ್ಲಿ ರಾಹುಲ್ ದೇಶಮುಖ್ ಎಂಬ ರೈತನೊಬ್ಬ ಜಮೀನಿನಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿದ್ದಾನೆ.

ಈ ಕ್ಯಾಮೆರಾಗಳು ಸೌರಶಕ್ತಿಯಿಂದ ಕಾರ್ಯನಿರ್ವಹಿಸುತ್ತಿದ್ದು, ವಿಶೇಷ ಏನೆಂದರೆ ಅನುಮಾನಾಸ್ಪದವಾಗಿ ಏನಾದರು ಕಂಡುಬಂದರೆ ಅಲಾರಾಂ ಸದ್ದು ಮಾಡುತ್ತದೆ.ಬೆಳ್ಳುಳ್ಳಿ ಬೆಲೆ ರಾಕೆಟ್‌ ವೇಗದಲ್ಲಿ ಏರಿಕೆ ಕಾಣುತ್ತಿದ್ದು, ಮಹಾರಾಷ್ಟ್ರದಲ್ಲಿ ಕೆಜಿಗೆ 600 ರೂಪಾಯಿಗಳ ಗಡಿ ದಾಟಿದೆ.ಇತ್ತ ಸಾಮಾಜಿಕ ಜಾಲತಾಣದಲ್ಲಿ ಬೆಳ್ಳುಳ್ಳಿ ಕಬಾಬ್ ​ ಸಾಕಷ್ಟು ಟ್ರೆಂಡ್​​ ಆಗುತ್ತಿದ್ದರೆ ಇತ್ತ ಬೆಳ್ಳುಳ್ಳಿ ಬೆಲೆ ಗಗನಕ್ಕೆ ಏರಿದೆ.

ಹಾಗಾಗಿ ಕೆಲವು ಕಡೆ ಬೆಳ್ಳುಳ್ಳಿ ಕಳ್ಳತನ ಕೂಡ ಹೆಚ್ಚಾಗಿದೆ. ಕಳೆದ 60 ವರ್ಷಗಳಲ್ಲಿ ಬೆಳ್ಳುಳ್ಳಿ ಬೆಲೆ ಇಷ್ಟೊಂದು ಏರಿಕೆ ಕಂಡಿರಲಿಲ್ಲ . ಆದರೆ ಈಗ ಬೆಳ್ಳುಳ್ಳಿ ಕೃಷಿ ಮಾಡಿದ ರೈತರು ಶ್ರೀಮಂತರಾದರೂ ಕೂಡ ತಮ್ಮ ಬೆಳೆ ಕಳ್ಳತನವಾಗುವ ಭೀತಿಯಲ್ಲಿದ್ದಾರೆ. ಈ ಕಾರಣ ಮಧ್ಯಪ್ರದೇಶದ ಚಿಂದ್ವಾಡ ಜಿಲ್ಲೆಯ ಮೊಹ್ಖೇದ್ ಪ್ರದೇಶದ ಐದಾರು ಗ್ರಾಮಗಳ ಹೊಲಗಳಲ್ಲಿ ರೈತರು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ.

Gayathri SG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

15 mins ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

33 mins ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

54 mins ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

1 hour ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

1 hour ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

2 hours ago