News Karnataka Kannada
Wednesday, May 08 2024
ಮಧ್ಯ ಪ್ರದೇಶ

ಮಧ್ಯಪ್ರದೇಶ: ಬಸ್ ಮತ್ತು ಕಾರು ಡಿಕ್ಕಿಯಾಗಿ 11ಮಂದಿ ಸ್ಥಳದಲ್ಲೇ ಸಾವು

Madhya Pradesh: 11 killed as bus collides with car
Photo Credit : Twitter

ಬೆತುಲ್, ನ.4: ಮಧ್ಯಪ್ರದೇಶದ ಬೇತುಲ್‌ ನಲ್ಲಿ ಬಸ್ ಮತ್ತು ಕಾರು ಡಿಕ್ಕಿಯಾಗಿ 11 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗುಡ್ಗಾಂವ್ ಮತ್ತು ಭೈಸ್ದೇಹಿ ನಡುವೆ ಅಪಘಾತ ಸಂಭವಿಸಿದೆ. ಶುಕ್ರವಾರ ನಸುಕಿನಲ್ಲಿ ಈ ದಾರುಣ ಘಟನೆ ನಡೆದಿದ್ದು, ರಸ್ತೆ ಅಪಘಾತದಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ.

ಬೆಳಗಿನ ಜಾವ 2 ಗಂಟೆ ಸುಮಾರಿಗೆ ಅತಿ ವೇಗವಾಗಿ ಬಂದು ಕಾರು ಪ್ರಯಾಣಿಕರಿಲ್ಲದ ಖಾಲಿ ಬಸ್‍ಗೆ ಡಿಕ್ಕಿ ಹೊಡೆದಿದೆ .ಗುದ್ದಿದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ ಎಂದು ಬೆತುಲ್ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್‍ಸ್ಪೆಕ್ಟರ್ ಶಿವರಾಜ್ ಸಿಂಗ್ ಠಾಕೂರ್ ತಿಳಿಸಿದ್ದಾರೆ.

ಆರು ಪುರುಷರು, ಮೂವರು ಮಹಿಳೆಯರು, ಸುಮಾರು ಐದು ವರ್ಷದ ಬಾಲಕಿ ಮತು ಪುಟ್ಟ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ಮಹಾರಾಷ್ಟ್ರದ ಅಮರಾವತಿಯಿಂದ ವಾಪಸ್ ಆಗುತ್ತಿದ್ದರು ಎಂದು ತಿಳಿದುಬಂದಿದೆ. ತನಿಖೆ ಮುಂದುವರೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು