ಮಧ್ಯಪ್ರದೇಶ: ರಸ್ತೆ ಅಪಘಾತ, ಐವರ ಸಾವು, 36 ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ ಮದುವೆ ದಿಬ್ಬಣ ಹೊತ್ತು ಸಾಗುತ್ತಿದ್ದ ಮಿನಿ ಟ್ರಕ್ ಪಲ್ಟಿಯಾಗಿ ಕನಿಷ್ಠ ಐವರು ಮೃತಪಟ್ಟು, 36 ಮಂದಿ ಗಾಯಗೊಂಡಿದ್ದಾರೆ.

ಶುಕ್ರವಾರ ತಡರಾತ್ರಿ ಸುಮಾರು 50 ಜನರನ್ನು ಹೊತ್ತೊಯ್ಯುತ್ತಿದ್ದ ಮಿನಿ ಟ್ರಕ್ ನ ಚಾಲಕ ಯು-ಟರ್ನ್ ನಲ್ಲಿ ವಾಹನದ ಮೇಲೆ ನಿಯಂತ್ರಣ ಕಳೆದುಕೊಂಡಿದ್ದರಿಂದ ಅದು  ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಆದಾಗ್ಯೂ, ವಾಹನದ ಚಾಲಕ ಮತ್ತು ವರ ಸುರಕ್ಷಿತವಾಗಿದ್ದಾರೆ, ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡವರಲ್ಲಿ ಆರು ಜನರ ಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡವರಿಗೆ ಬಿಯೋಹಾರಿ ಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಾಹನದ ಅತಿವೇಗ ಮತ್ತು ಓವರ್ಲೋಡ್ನಿಂದಾಗಿ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜನರು ಮದುವೆ ಸಮಾರಂಭಕ್ಕಾಗಿ ಧೋಲಾರ್ ನಿಂದ ಡೋಲ್ ಹಳ್ಳಿಗೆ ಹೋಗುತ್ತಿದ್ದರು.

ಚಾಲಕನ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಮೋಟಾರು ವಾಹನ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Ashika S

Recent Posts

ಮತ್ತೆ ಮಳೆಯ ಆರ್ಭಟ; ಶಾಲಾ ಕಾಲೇಜುಗಳಿಗೆ ರಜೆ, ವಿಮಾನ ಹಾರಾಟ ಬಂದ್

ಎಪ್ರಿಲ್ ತಿಂಗಳಲ್ಲಿ ಮಳೆಯ ಆರ್ಭಟಕ್ಕೆ ನಲುಗಿದ್ದ ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತೆ ಮಳೆ ಪ್ರಾರಂಭವಾಗಿದೆ. ಮರಳುಗಾಡು ದುಬೈ ಮಳೆಯಿಂದಾಗಿ ತತ್ತರಿಸಿ…

13 mins ago

ಯುವಕನಿಗೆ ಲೈಂಗಿಕ ಕಿರುಕುಳ: ವಾಸ್ತು ತಜ್ಞನ ಬಂಧನ

ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ವಾಸ್ತುತಜ್ಞನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

24 mins ago

ʼತಡರಾತ್ರಿ ತಾಯಿ ಕಾಣೆʼ; ರೇವಣ್ಣನ ವಿರುದ್ಧ ಯವಕನಿಂದ ದೂರು ದಾಖಲು

ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸಂಕಷ್ಟಗಳ ಮೇಲೆ ಸಂಕಷ್ಟ ಎದುರಾಗಿವೆ. ಇದೀಗ ಅವರ ವಿರುದ್ಧ…

31 mins ago

ಧರ್ಮಸ್ಥಳ: ದಾಂಪತ್ಯ ಜೀವನಕ್ಕೆ ಕಾಲಿಟ್ಟ 123 ಜೋಡಿ

ಇಲ್ಲಿ ಬುಧವಾರ ನಡೆದ ಸಾಮೂಹಿಕ ವಿವಾಹದಲ್ಲಿ 39 ಅಂತರ್ಜಾತಿಯ ಜೋಡಿ ಸೇರಿದಂತೆ ಒಟ್ಟು 123 ವಧು–ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.…

43 mins ago

ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಕೇಸ್ ದಾಖಲು !

ಈಗಾಗಲೇ ಲೈಂಗಿಕ ದೌರ್ಜನ್ಯ, ಕಿರುಕುಳ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್​. ಡಿ ರೇವಣ್ಣ ಪುತ್ರ, ಸಂಸದ ಪ್ರಜ್ವಲ್​​ ರೇವಣ್ಣಗೆ…

56 mins ago

ವಿಪರೀತ ಸೆಖೆಯಿದೆ ಎಂದು ಟೆರೇಸ್ ನಲ್ಲಿ ಮಲಗಿದ್ದ ಶಿಕ್ಷಕ ಸಾವು

ವಿಪರೀತ ಸೆಖೆಯಿದೆ ಎಂದು ಮನೆಯ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ.

1 hour ago