ಖಾಂಡ್ವಾ: ನಾಲ್ಕು ವರ್ಷದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿ ಕಬ್ಬಿನ ಗದ್ದೆಗೆ ಎಸೆದು ಹೋಗಿರುವ ಘಟನೆ ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ನಡೆದಿದೆ.
ಸೋಮವಾರ ಮೈದಾನದ ಪೊದೆಗಳಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಾಲಕಿ ಪತ್ತೆಯಾಗಿದ್ದಾಳೆ. ಬಾಲಕಿ ಸೋಮವಾರ ಬೆಳಗ್ಗೆ ಜಸ್ವಾಡಿಯಲ್ಲಿರುವ ತನ್ನ ಸಂಬಂಧಿಕರ ಮನೆಯಿಂದ ಕಾಣೆಯಾಗಿದ್ದಾಳೆ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ನಂತರ ಬಾಲಕಿಗಾಗಿ ಹುಡುಕಾಟ ಆರಂಭಿಸಲಾಯಿತು.
ಈ ವೇಳೆ ಪೊಲೀಸರು ಪ್ರದೇಶದ ಉಪಾಹಾರ ಗೃಹದಲ್ಲಿ ಕೆಲಸ ಮಾಡುತ್ತಿದ್ದ 25 ವರ್ಷದ ವ್ಯಕ್ತಿಯ ಮೇಲೆ ಅನುಮಾನಗೊಂಡರು. ಈತ ಭಾನುವಾರ ರಾತ್ರಿ ಸಂತ್ರಸ್ತೆಯ ಕುಟುಂಬಸ್ಥರಿಗೆ ಬೆಡ್ ಶೀಟ್ ಖರೀದಿಸುವಂತೆ ಒತ್ತಾಯಿಸಿದ್ದನು. ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ವಿಚಾರಣೆ ನಡೆಸಿದ ವೇಳೆ ಆರೋಪಿ ಬಾಲಕಿಯನ್ನು ಗದ್ದೆಗೆ ಕರೆದೊಯ್ದು ಅತ್ಯಾಚಾರವೆಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ.
ಬಾಲಕಿಯನ್ನು ಆರಂಭದಲ್ಲಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ನಂತರ ಚಿಕಿತ್ಸೆಗಾಗಿ ಇಂದೋರ್ಗೆ ಸ್ಥಳಾಂತರಿಸಲಾಯಿತು. ಆರೋಪಿ ವಿರುದ್ಧ ಕೇಸ್ ದಾಖಲಾಗಿದ್ದು, ಪೊಲೀಸರ ವಶದಲ್ಲಿದ್ದಾನೆ.