ಮಧ್ಯಪ್ರದೇಶ: ಮಧ್ಯಪ್ರದೇಶದ ಸಾಗರ್ ನಗರದ ಖಾಸಗಿ ಶಾಲೆಯೊಂದರಲ್ಲಿ 39 ಮಕ್ಕಳಿಗೆ ಕೊರೋನ ವೈರಸ್ ವಿರೋಧಿ ಲಸಿಕೆ ಅನ್ನು ನೀಡಲು ಲಸಿಕೆದಾರನೊಬ್ಬ ಒಂದೇ ಸಿರಿಂಜ್ ಅನ್ನು ಬಳಸಿದ್ದಾನೆ ಎಂದು ಆರೋಪಿಸಲಾಗಿದೆ. ನಗರದ ಜೈನ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಮೆಗಾ ಲಸಿಕೆ ಅಭಿಯಾನದ ವೇಳೆ ಈ ಘಟನೆ ನಡೆದಿದೆ.
ಇದಕ್ಕೆ ಸಂಬಂಧಿಸಿ ಲಸಿಕೆ ನೀಡಿದಾತ ಹಾಗೂ ಜಿಲ್ಲಾ ಲಸಿಕೆ ಅಧಿಕಾರಿಯನ್ನು ಬಂಧಿಸಿ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಿತೇಂದ್ರ ಅಹಿರ್ವಾರ್ ಎಂಬುವವನ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಿಸಲಾಗಿದೆ ಎಂದು ಜಿಲ್ಲಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಹಿರ್ವಾರ್ ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಆರೋಗ್ಯ ಇಲಾಖೆಯಿಂದ ಲಸಿಕೆ ಕಾರ್ಯಕ್ರಮವನ್ನು ಕೈಗೊಳ್ಳಲು ತರಬೇತಿ ಪಡೆದಿದ್ದಾನೆ ಎಂದು ಸಾಗರ್ ಜಿಲ್ಲೆಯ ಮುಖ್ಯ ವೈದ್ಯಕೀಯ ಹಾಗೂ ಆರೋಗ್ಯ ಅಧಿಕಾರಿ (ಸಿಎಂಎಚ್ಒ) ಡಾ. ಡಿ. ಕೆ. ಗೋಸ್ವಾಮಿ ತಿಳಿಸಿದ್ದಾರೆ
ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…
ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.
ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…
ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.
ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…
ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…